ADVERTISEMENT

ಗಜೇಂದ್ರಗಡ: ಕಾಂಗ್ರೆಸ್‌ ತೊರೆದು ಬಿಜೆಪಿ ಸೇರಿದ ಗ್ರಾಮ ಪಂಚಾಯಿತಿ ಅಧ್ಯಕ್ಷೆ

​ಪ್ರಜಾವಾಣಿ ವಾರ್ತೆ
Published 11 ಸೆಪ್ಟೆಂಬರ್ 2024, 13:23 IST
Last Updated 11 ಸೆಪ್ಟೆಂಬರ್ 2024, 13:23 IST
ಗಜೇಂದ್ರಗಡ ಸಮೀಪದ ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗವ್ವ ಶಂಕ್ರಿ ಕಾಂಗ್ರೆಸ್‌ ತೊರೆದು ಮಾಜಿ ಸಚಿವ ಕಳಕಪ್ಪ ಬಂಡಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು
ಗಜೇಂದ್ರಗಡ ಸಮೀಪದ ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗವ್ವ ಶಂಕ್ರಿ ಕಾಂಗ್ರೆಸ್‌ ತೊರೆದು ಮಾಜಿ ಸಚಿವ ಕಳಕಪ್ಪ ಬಂಡಿ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು   

ಗಜೇಂದ್ರಗಡ: ಸಮೀಪದ ರಾಜೂರ ಗ್ರಾಮ ಪಂಚಾಯಿತಿ ಅಧ್ಯಕ್ಷೆ ನಿಂಗವ್ವ ಎಸ್.‌ ಶಂಕ್ರಿ ಕಾಂಗ್ರೆಸ್‌ ತೊರೆದು ಬುಧವಾರ ಮಾಜಿ ಸಚಿವ ಕಳಕಪ್ಪ ಬಂಡಿ ಅವರ ಸಮ್ಮುಖದಲ್ಲಿ ಬಿಜೆಪಿಗೆ ಸೇರ್ಪಡೆಯಾದರು.

ಈ ವೇಳೆ ಮಾಜಿ ಸಚಿವ ಕಳಕಪ್ಪ ಬಂಡಿ ಮಾತನಾಡಿ, ‘ಎಲ್ಲ ಸದಸ್ಯರು ಸಹಕಾರದಿಂದ ಪಂಚಾಯಿತಿ ವ್ಯಾಪ್ತಿಯ ಗ್ರಾಮಗಳ ಅಭಿವೃದ್ಧಿಗೆ ಶ್ರಮಿಸಿʼ ಎಂದರು.

ಬಿಜೆಪಿ ಮುಂಖಡರಾದ ಶಿವಾನಂದ ಮಠದ, ಅಶೋಕ ವನ್ನಾಲ, ಉಮೇಶ ಮಲ್ಲಾಪುರ, ಬಾಳು ಗೌಡರ, ಶಿವಕುಮಾರ ಜಾಧವ, ಪರಶುರಾಮ ಚಿಲಝರಿ, ಶೇಖಪ್ಪ ರಾಠೋಡ, ಶರಣಪ್ಪ ಇಟಗಿ, ಚಂದ್ರುಗೌಡ ಪಾಟೀಲ ಇದ್ದರು.

ADVERTISEMENT

ಗ್ರಾಮ ಪಂಚಾಯಿತಿಯ ಮೊದಲ ಅವಧಿಯಲ್ಲಿ ಬಿಜೆಪಿಯಲ್ಲಿ ಗುರುತಿಸಿಕೊಂಡಿದ್ದ ನಿಂಗವ್ವ ಶಂಕ್ರಿ, ಎರಡನೇ ಅವಧಿಗೆ ಅಧ್ಯಕ್ಷ ಸ್ಥಾನಕ್ಕೆ ಕಳೆದ ವರ್ಷ ಜು. 24ರಂದು ನಡೆದಿದ್ದ ಚುನಾವಣೆಯಲ್ಲಿ ಕಾಂಗ್ರೆಸ್‌ ಬೆಂಬಲದೊಂದಿಗೆ ಅಧ್ಯಕ್ಷೆಯಾಗಿ ಆಯ್ಕೆಯಾಗಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.