ರೋಣ: ‘ಮುಖ್ಯಮಂತ್ರಿಗಳು ಶಾಸಕರಿಗೆ ನೀಡಿದ ₹ 50 ಕೋಟಿ ವಿಶೇಷ ಅನುದಾನದಲ್ಲಿ ಲೋಕೋಪಯೋಗಿ ಇಲಾಖೆಗೆ ಕ್ಷೇತ್ರದಲ್ಲಿ ರಸ್ತೆ ನಿರ್ಮಿಸಲು ₹38 ಕೋಟಿ ನೀಡಲಾಗಿದ್ದು, ಉಳಿದ ₹12 ಕೋಟಿ ಅನುದಾನದಲ್ಲಿ ಅಮೃತ್ ಯೋಜನೆ ಅಡಿ ಪೈಪ್‌ಲೈನ್ ಅಳವಡಿಸಲು ಪಟ್ಟಣದ ಸಿಸಿ ರಸ್ತೆಗಳನ್ನು ಅಗೆದಿದ್ದು, ರಸ್ತೆಗಳ ಅಭಿವೃದ್ಧಿಗೆ ₹4 ಕೋಟಿ ನೀಡಲಾಗಿದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಅಬ್ಬಿಗೇರಿ ರಸ್ತೆಯಲ್ಲಿರುವ ಪುರಸಭೆಯ ತ್ಯಾಜ್ಯ ವಿಲೇವಾರಿ ಘಟಕದಲ್ಲಿ ಎನ್‌ಜಿಟಿ ಮತ್ತು ಸ್ವಚ್ಛ ಭಾರತ ಅಭಿಯಾನದಡಿ ₹3.12 ಕೋಟಿ ವೆಚ್ಚದಲ್ಲಿ ಮಲ ತ್ಯಾಜ್ಯ ಸಂಸ್ಕರಣಾ (ಎಫ್‌ಎಸ್‌ಟಿಪಿ) ಘಟಕ ನಿರ್ಮಾಣ ಕಾಮಗಾರಿ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
‘ಪಟ್ಟಣದ ಸ್ವಚ್ಛತೆಗೆ ಪುರಸಭೆ ಆದ್ಯತೆ ನೀಡಬೇಕು. ಮುಂದಿನ 9 ತಿಂಗಳಲ್ಲಿ ಮಲ ತ್ಯಾಜ್ಯ ಸಂಸ್ಕರಣಾ ಘಟಕದ ಕಾಮಗಾರಿ ಪೂರ್ಣಗೊಳಿಸಬೇಕು. ಪಟ್ಟಣದ ಸೌಂದರ್ಯೀಕರಣ ಹೆಚ್ಚಿಸಲು ಹಲವು ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಲಾಗಿದ್ದು, ಮೂಲ ಸೌಕರ್ಯಗಳ ಪೂರೈಕೆಗೆ ಮೊದಲ ಆದ್ಯತೆ ನೀಡಲಾಗುವುದು’ ಎಂದರು.
‘ಸಾಕಷ್ಟು ಭಾರಿ ಅಭಿವೃದ್ಧಿ ಕಾಮಗಾರಿಗಳ ಕುರಿತು ಸಲಹೆ ಹಾಗೂ ಅನುದಾನ ನೀಡಿದರು. ಸಹ ಪುರಸಭೆ ಅಧಿಕಾರಿಗಳು ಉದಾಸಿನ ಮಾಡುತ್ತಿದ್ದಾರೆ. ಅಭಿವೃದ್ಧಿ ವಿಷಯದಲ್ಲಿ ಹುಡುಗಾಟಿಕೆ ಮಾಡುವುದು ಸರಿಯಲ್ಲ ಎಂದು ಪುರಸಭೆ ಮುಖ್ಯಾಧಿಕಾರಿ ರಮೇಶ್ ಹೊಸಮನಿ ವಿರುದ್ಧ ಹರಿಹಾಯ್ದರು.
ಜಿಲ್ಲಾ ಕಾಂಗ್ರೆಸ್ ಮಹಾ ಪ್ರಧಾನ ಕಾರ್ಯದರ್ಶಿ ವಿ.ಬಿ. ಸೋಮಕಟ್ಟಿಮಠ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಉಪಾಧ್ಯಕ್ಷ ಹನಮಂತಪ್ಪ ತಳ್ಳಿಕೇರಿ, ಸದಸ್ಯರಾದ ಬಾವಾಸಾಬ ಬೆಟಗೇರಿ, ಮಲ್ಲಯ್ಯ ಮಹಾಪುರಷಮಠ, ಸಂಗಪ್ಪ ಜಿಡ್ಡಿಬಾಗಿಲ, ದಾವಲಸಾಬ ಬಾಡಿನ, ದುರಗಪ್ಪ ಹಿರೇಮನಿ, ಚನ್ನಬಸಮ್ಮ ಹಿರೇಮಠ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.