ರೋಣ: ‘ಹೊಸ ತಂತ್ರಜ್ಞಾನ ಶಿಕ್ಷಣ ಪದ್ದತಿ ಅಳವಡಿಸಿಕೊಂಡು ಬೋಧನೆ ಮಾಡಿದಾಗ ಮಾತ್ರ ಶಿಕ್ಷಣದ ಗುಣಮಟ್ಟ ಹೆಚ್ಚುತ್ತದೆ’ ಎಂದು ಶಾಸಕ ಜಿ.ಎಸ್. ಪಾಟೀಲ ಹೇಳಿದರು.
ಪಟ್ಟಣದ ಗುರುಭವನದಲ್ಲಿ ಜಿಲ್ಲಾ ಪಂಚಾಯಿತಿ, ತಾಲ್ಲೂಕು ಪಂಚಾಯಿತಿ ರೋಣ, ಕ್ಷೇತ್ರ ಶಿಕ್ಷಣಾಧಿಕಾರಿಗಳು ಹಾಗೂ ಸಮನ್ವಯ ಅಧಿಕಾರಿಗಳ ಕಾರ್ಯಾಲಯ, ಪ್ರಾಥಮಿಕ ಹಾಗೂ ಪ್ರೌಢ ಶಾಲಾ ಶಿಕ್ಷಕರ ಸಂಘಗಳ ಸಂಯುಕ್ತಾಶ್ರಯದಲ್ಲಿ ಶನಿವಾರ ನಡೆದ ಶಿಕ್ಷಕರ ದಿನಾಚರಣೆ ಹಾಗೂ ನಿವೃತ್ತ ಶಿಕ್ಷಕರಿಗೆ ಸನ್ಮಾನ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
‘ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಹಾಗೂ ಯುಕೆಜಿ ಪ್ರಾರಂಬಿಸಲಾಗಿದ್ದು, ಈ ಕಾರ್ಯಕ್ರಮ ಯಶಸ್ವಿಯಾಗಿದೆ. ಜಿಲ್ಲೆಯಲ್ಲಿ 700 ಶಾಲೆಗಳಲ್ಲಿ ಶೌಚಾಲಯ ಕೊರತೆಯಿದೆ. ಶೌಚಾಲಯ ನಿರ್ಮಾಣಕ್ಕೆ ಕನಿಷ್ಟ ₹7 ಲಕ್ಷ ವೆಚ್ಚವಾಗಲಿದ್ದು ವಿಶೇಷ ಅನುದಾನಕ್ಕೆ ಮುಖ್ಯಮಂತ್ರಿಗಳಲ್ಲಿ ವಿನಂತಿಸಲಾಗಿದೆ’ ಎಂದರು.
ಶಿಕ್ಷಣ ಇಲಾಖೆ ನಿವೃತ್ತ ಉಪ ನಿರ್ದೇಶಕ ಎ.ಸಿ. ಗಂಗಾಧರ ಮಾತನಾಡಿದರು. ಎಸ್.ಆರ್. ಪಾಟೀಲ ಪ್ರತಿಷ್ಠಾನದಿಂದ ರೋಣ ಹಾಗೂ ಗಜೇಂದ್ರಗಡ ತಾಲ್ಲೂಕಿನ ವಿವಿಧ ಶಾಲೆಗಳ 15 ಶಿಕ್ಷಕರಿಗೆ ತಾಲ್ಲೂಕು ಮಟ್ಟದ ಉತ್ತಮ ಶಿಕ್ಷಕ ಪ್ರಶಸ್ತಿ ಪ್ರಧಾನ ಮಾಡಲಾಯಿತು. ನಿವೃತ್ತ ಶಿಕ್ಷಕರು ಹಾಗೂ ಶಿಕ್ಷಕಿಯರಿಗೆ ಸನ್ಮಾನಿಸಲಾಯಿತು.
ಕಾರ್ಯಕ್ರಮದ ಸಾನ್ನಿಧ್ಯವನ್ನು ಗುಲಗಂಜಿ ಮಠದ ಗುರುಪಾದ ಸ್ವಾಮೀಜಿ ವಹಿಸಿದ್ದರು. ಶಾಸಕ ಜಿ.ಎಸ್. ಪಾಟೀಲ ಅವರು ₹70 ಲಕ್ಷ ವೆಚ್ಚದಲ್ಲಿ ಗುರುಭವನ ಮೇಲ್ಮಹಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿದರು.
ಸಮಾರಂಭದಲ್ಲಿ ರೋಣ ತಾಲ್ಲೂಕು ಪಂಚ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಅಧ್ಯಕ್ಷ ಮಿಥುನ ಪಾಟೀಲ, ತಹಶೀಲ್ದಾರ್ ನಾಗರಾಜ.ಕೆ, ಪುರಸಭೆ ಅಧ್ಯಕ್ಷೆ ಬಸಮ್ಮ ಕೊಪ್ಪದ, ಮುಖಂಡರಾದ ಸಿದ್ದಣ್ಣ ಬಂಡಿ, ವ್ಹಿ.ಬಿ. ಸೋಮನಕಟ್ಟಿಮಠ, ಮಂಜುಳಾ ಹುಲ್ಲಣ್ಣವರ, ಎಚ್.ಎಸ್. ಸೊಂಪೂರ, ಪ್ರಭು ಮೇಟಿ, ವೀರಣ್ಣ ಶೆಟ್ಟರ್, ಬಸವರಾಜ ನವಲಗುಂದ, ವ್ಹಿ.ಆರ್. ಗುಡಿಸಾಗರ, ಹನಮಂತಪ್ಪ ದೊಡ್ಡಮನಿ, ಪರಶುರಾಮ ಅಳಗವಾಡಿ, ಎಸ್.ಜಿ. ದಾನಪ್ಪಗೌಡ್ರ, ವೈ.ಡಿ. ಗಾಣಿಗೇರ, ರಮೇಶ ಪಲ್ಲೇದ, ಯಚ್ಚರಗೌಡ ಗೋವಿಂದಗೌಡ್ರ, ತಾಲ್ಲೂಕು ಪಂಚಾಯಿತಿ ಇಒ ಚಂದ್ರಶೇಖರ ಕಂದಕೂರ, ಕ್ಷೇತ್ರ ಸಮನ್ವಯ ಅಧಿಕಾರಿ ಎಂ.ಎ. ಫಣಿಬಂಧ, ಅಕ್ಷರ ದಾಸೋಹ ಸಹಾಯಕ ನಿರ್ದೇಶಕ ಆರ್.ಎಲ್. ನಾಯ್ಕರ್, ಬಿಇಒ ಅರ್ಜುನ ಕಾಂಬೋಗಿ, ಎಸ್.ವ್ಹಿ.ಗವಿ, ಎಂ.ವೈ.ಜಕ್ಕರಸಾನಿ ಸಿ.ಕೆ. ಕೇಸರಿ, ಗೀತಾ ಆಲೂರ, ನಾಜಬೇಗಂ ಯಲಿಗಾರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.