ADVERTISEMENT

ಗದುಗಿನಲ್ಲಿ ಫೆ.18ರಂದು ಗ್ಯಾರಂಟಿ ಸಮಾವೇಶ

​ಪ್ರಜಾವಾಣಿ ವಾರ್ತೆ
Published 13 ಫೆಬ್ರುವರಿ 2026, 5:46 IST
Last Updated 13 ಫೆಬ್ರುವರಿ 2026, 5:46 IST
ಮುಂಡರಗಿ ತಾಲ್ಲೂಕು ಪಂಚಾಯ್ತಿ ಸಾಮಥ್ರ್ಯ ಸೌಧದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಜರುಗಿತು
ಮುಂಡರಗಿ ತಾಲ್ಲೂಕು ಪಂಚಾಯ್ತಿ ಸಾಮಥ್ರ್ಯ ಸೌಧದಲ್ಲಿ ಗುರುವಾರ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆ ಜರುಗಿತು   

ಮುಂಡರಗಿ: ‘ಈಗಾಗಲೆ ರಾಜ್ಯದ ಹಾವೇರಿ, ಬೆಳಗಾವಿ, ಧಾರವಾಡ, ಕಾರವಾರಗಳಲ್ಲಿ ಗ್ಯಾರಂಟಿ ಸಮಾವೇಶ ಜರುಗಿದ್ದು, ಫೆ.18ರಂದು ಗದಗನಲ್ಲಿ ಗ್ಯಾರಂಟಿ ಸಮಾವೇಶ ಆಯೋಜಿಸಲಾಗಿದೆ. ಹೆಚ್ಚಿನ ಸಂಖ್ಯೆಯ ಫಲಾನುಭವಿಗಳು ಸಮಾವೇಶದಲ್ಲಿ ಪಾಲ್ಗೊಂಡು ಸಮಾವೇಶ ಯಶಸ್ವಿಗೊಳಿಸಬೇಕು’ ಎಂದು ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಘಟಕದ ಅಧ್ಯಕ್ಷ ಬಿ.ಬಿ.ಅಸೂಟಿ ಹೇಳಿದರು.

ಪಟ್ಟಣದ ತಾಲ್ಲೂಕು ಪಂಚಾಯಿತಿ ಸಾಮರ್ಥ್ಯ ಸೌಧದಲ್ಲಿ ಗುರುವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಗತಿ ಪರಿಶೀಲನಾ ಸಭೆಯಲ್ಲಿ ಅವರು ಮಾತನಾಡಿದರು.

ಅನ್ನಭಾಗ್ಯ, ಸ್ತ್ರೀ ಶಕ್ತಿ, ಯುವನಿಧಿ, ಗೃಹಲಕ್ಷ್ಮಿ ಹಾಗೂ ಗೃಹ ಜ್ಯೋತಿ ಯೋಜನೆಗಳಿಗಾಗಿ ರಾಜ್ಯ ಸರ್ಕಾರವು ವಾರ್ಷಿಕ ₹53ಸಾವಿರ ಕೋಟಿ ರೂಪಾಯಿ ವಿನಿಯೋಗಿಸುತ್ತಿದೆ. ಇದರಿಂದ ರಾಜ್ಯದ ಬಡ ಹಾಗೂ ಮಧ್ಯಮ ವರ್ಗಗಳ ಜನರ ಜೀವನ ಮಟ್ಟ ಸುಧಾರಿಸಿದ್ದು, ಗ್ಯಾರಂಟಿ ಯೋಜನೆಗಳು ಜನಮನ ಗೆದ್ದಿವೆ ಎಂದು ತಿಳಿಸಿದರು.

ADVERTISEMENT

ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ತಾಲ್ಲೂಕು ಅಧ್ಯಕ್ಷ ಡಿ.ಡಿ.ಮೋರನಾಳ ಮಾತನಾಡಿ, ಗ್ಯಾರಂಟಿ ಯೋಜನೆಗಳಿಂದ ರಾಜ್ಯದ ಎಲ್ಲ ವರ್ಗದ ಜನರಿಗೆ ಅನುಕೂಲವಾಗಿದೆ. ಗದಗ ಜಿಲ್ಲೆಯ ಗ್ಯಾರಂಟಿ ಸಮಾವೇಶದಲ್ಲಿ ತಾಲ್ಲೂಕಿನಿಂದ ಹೆಚ್ಚು ಫಲಾನುಭವಿಗಳು ಪಾಲ್ಗೊಳ್ಳಲಿದ್ದು, ಸಮಾವೇಶ ಯಶಸ್ವಿಗೊಳಿಸಲು ಸಹಕಾರ ನೀಡಲಾಗುವುದು ಎಂದು ಭರವಸೆ ನೀಡಿದರು.

ಮಹಿಳಾ ಮತ್ತು ಮಕ್ಕಳ ಕಲ್ಯಾಣ ಅಭಿವೃದ್ಧಿ ಇಲಾಖೆಯ ಸಹಾಯಕ ನಿದೇರ್ಶಕ ಮಹಾದೇವ ಇಸರನಾಳ, ಹೆಸ್ಕಾಂ ಎಇ ಚನ್ನಪ್ಪ ಲಮಾಣಿ, ಸಾರಿಗೆ ಡಿಪೋ ಅಧಿಕಾರಿ ಬೆಟಗೇರಿ ಅವರು ತಮ್ಮ ಇಲಾಖೆಗಳ ಮಾಹಿತಿ ನೀಡಿದರು. ವಿವಿಧ ವಿಷಯ ಕುರಿತು ಸದಸ್ಯರು ಅಧಿಕಾರಿಗಳೊಂದಿಗೆ ಚರ್ಚಿಸಿದರು.

ಪಂಚ ಗ್ಯಾರಂಟಿ ಯೋಜನೆ ಅನುಷ್ಠಾನ ಸಮಿತಿ ಜಿಲ್ಲಾ ಉಪಾಧ್ಯಕ್ಷ ಹೇಮಂತಗೌಡ ಪಾಟೀಲ, ಸದಸ್ಯ ಪುಲಿಕೇಶಿಗೌಡ ಪಾಟೀಲ, ತಾಲ್ಲೂಕು ಸಮಿತಿ ಕಾರ್ಯದರ್ಶಿ ಇ.ಒ. ವಿಶ್ವನಾಥ ಹೊಸಮನಿ, ಸದಸ್ಯರಾದ ನಾಗರಾಜ ಸಜ್ಜನ, ವಿಶ್ವನಾಥ ಪಾಟೀಲ, ಭುವನೇಶ್ವರಿ ಕಲ್ಲಕುಟಿಗರ, ಜೈಲಾನಸಾಬ ವಡ್ಡಟ್ಟಿ, ರಾಮಣ್ಣ ಮೇಗಲಮನಿ, ಉಮೇಶ ಕಲಾಲ, ನಿಂಗಪ್ಪ ಮಜ್ಜಿಗಿ, ಶರಣಪ್ಪ ಮಲ್ಲಾಪೂರ, ಮಹೇಶ ದ್ರಾಕ್ಷಿ ಉಪಸ್ಥಿತರಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.