ಗದಗ: ಕರ್ನಾಟಕ ಸಾಹಿತ್ಯ ಅಕಾಡೆಮಿಯ ವಿಶೇಷ ಘಟಕ ಯೋಜನೆಯಡಿ ‘ದಲಿತ ಸಾಹಿತ್ಯ: ಅರ್ಧ ಶತಮಾನ’ ಹೆಸರಿನಲ್ಲಿ ಮೂರು ದಿನಗಳ ಅಧ್ಯಯನ ಶಿಬಿರವನ್ನು ಸೆಪ್ಟೆಂಬರ್‌ನಲ್ಲಿ ನಡೆಸಲಿದೆ.
ಆಸಕ್ತಿ ಇರುವ 20ರಿಂದ 50 ವರ್ಷದೊಳಗಿನ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಆಸಕ್ತ ಅಭ್ಯರ್ಥಿಗಳು ಕರ್ನಾಟಕ ಸಾಹಿತ್ಯ ಅಕಾಡೆಮಿಯ ವೆಬ್‌ಸೈಟ್ https://sahithyaacademy.karnataka.gov.in ಮೂಲಕ ಅರ್ಜಿ ನಮೂನೆ ಹಾಗೂ ವಿವರಗಳನ್ನು ಪಡೆದುಕೊಳ್ಳಬಹುದು. ಅರ್ಜಿ ಸಲ್ಲಿಸಲು ಜುಲೈ 20 ಕೊನೆಯ ದಿನ ಎಂದು ಕರ್ನಾಟಕ ಸಾಹಿತ್ಯ ಅಕಾಡೆಮಿ ಪ್ರಕಟಣೆ ತಿಳಿಸಿದೆ.
ವಿವಿಧ ಸೌಲಭ್ಯಕ್ಕೆ ಅರ್ಜಿ ಆಹ್ವಾನ
ಗದಗ: ನರೇಗಲ್ ಪಟ್ಟಣ ಪಂಚಾಯಿತಿಯ 2025-26ನೇ ಸಾಲಿನ ಶೇ 24.10 ಎಸ್‌ಎಫ್‌ಸಿ ಮುಕ್ತ ನಿಧಿಯಲ್ಲಿ ವಿವಿಧ ಸೌಲಭ್ಯಕ್ಕೆ ಅರ್ಹರಿಂದ ಅರ್ಜಿ ಆಹ್ವಾನಿಸಲಾಗಿದೆ.
ಎಂಜಿನಿಯರಿಂಗ್ ವ್ಯಾಸಂಗ ಮಾಡುತ್ತಿರುವ ಪರಿಶಿಷ್ಟ ಜಾತಿಯ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಲ್ಯಾಪ್‌ಟಾಪ್, ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದ ಫಲಾನುಭವಿಗಳಿಗೆ ಹೊಲಿಗೆ ಯಂತ್ರ, ಶೇ5ರಷ್ಟು ಅನುದಾನದಲ್ಲಿ ಅಂಗವಿಕಲರಿಗೆ ಕೃತಕ ಶ್ರವಣ ಸಾಧನ ಸಾಮಗ್ರಿಗಳನ್ನು ನೀಡುವ ಕಾರ್ಯಕ್ರಮಗಳಿಗೆ ಅರ್ಜಿ ಆಹ್ವಾನಿಸಲಾಗಿದೆ.
ಸರ್ಕಾರದ ಸುತ್ತೋಲೆಯಂತೆ ನರೇಗಲ್ ಪಟ್ಟಣದ ಕಾಯಂ ರಹವಾಸಿಯಾಗಿರಬೇಕು. ಅರ್ಜಿಯನ್ನು ಜುಲೈ 17ರ ಸಂಜೆ 5 ಗಂಟೆಯೊಳಗೆ ಮುಖ್ಯಾಧಿಕಾರಿ ಕಚೇರಿ, ಪಟ್ಟಣ ಪಂಚಾಯಿತಿ, ನರೇಗಲ್ ಈ ವಿಳಾಸಕ್ಕೆ ಸಲ್ಲಿಸಬೇಕು.
ಮಾಹಿತಿಗೆ ನರೇಗಲ್ ಪಟ್ಟಣ ಪಂಚಾಯಿತಿ ಕಾರ್ಯಾಲಯದ ದೂರವಾಣಿ ಸಂಖ್ಯೆ 08381-268228 ಸಂಪರ್ಕಿಸುವಂತೆ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.