ADVERTISEMENT

ಮೇಲಧಿಕಾರಿಗಳಿಂದ ಕಿರುಕುಳ: ದಯಾಮರಣಕ್ಕೆ ಅನುಮತಿ ಕೋರಿ ರಾಷ್ಟ್ರಪತಿಗೆ ಪತ್ರ

​ಪ್ರಜಾವಾಣಿ ವಾರ್ತೆ
Published 20 ಜನವರಿ 2026, 23:30 IST
Last Updated 20 ಜನವರಿ 2026, 23:30 IST
<div class="paragraphs"><p>ಸಾಂದರ್ಭಿಕ ಚಿತ್ರ</p></div>

ಸಾಂದರ್ಭಿಕ ಚಿತ್ರ

   

ಮುಂಡರಗಿ (ಗದಗ ಜಿಲ್ಲೆ): ‘ಮೇಲಧಿಕಾರಿಗಳು ಕಿರುಕುಳ ನೀಡುತ್ತಿದ್ದು, ನನಗೆ ದಯಾಮರಣಕ್ಕೆ ಅನುಮತಿ ನೀಡಬೇಕು’ ಎಂದು ಕೋರಿ ತಾಲ್ಲೂಕಿನ ಡಂಬಳ ಹೋಬಳಿಯ ಗ್ರಾಮ ಆಡಳಿತಾಧಿಕಾರಿ ಯೋಗೇಶ ಕುರಹಟ್ಟಿ ರಾಷ್ಟ್ರಪತಿ ಅವರಿಗೆ ಪತ್ರ ಬರೆದಿದ್ದಾರೆ.

‘ಸಮರ್ಪಕವಾಗಿ ಕೆಲಸ ನಿರ್ವಹಿಸಿದರೂ ಕಿರುಕುಳ ನೀಡುತ್ತಾರೆ. ವಿನಾಕಾರಣ ಪದೇ ಪದೇ ನೋಟಿಸ್ ನೀಡಿ ಹಿಂಸೆ ಕೊಡುತ್ತಾರೆ. ದಿನಚರಿ ನೀಡಿಲ್ಲ ಎಂಬ ಆರೋಪದ ಮೇಲೆ ಎರಡು ತಿಂಗಳಿನಿಂದ ವೇತನ ತಡೆಹಿಡಿದಿದ್ದಾರೆ’ ಎಂದು ಪತ್ರದಲ್ಲಿ ಆರೋಪಿಸಿದ್ದಾರೆ. 

ADVERTISEMENT

‘ಯೋಗೀಶ ಕುರಹಟ್ಟಿ ಅವರು ಸಮರ್ಪಕವಾಗಿ ಕೆಲಸ ನಿರ್ವಹಿಸುತ್ತಿಲ್ಲ. ಹಲವು ಬಾರಿ ನೋಟಿಸ್‌ ನೀಡಲಾಗಿದೆ. ಪ್ರೊಬೆಷನರಿ ಅವಧಿಯನ್ನೂ ಪೂರ್ಣಗೊಳಿಸಿಲ್ಲ. ಪತ್ರ ಕುರಿತಂತೆ ಮೇಲಧಿಕಾರಿಗಳ ಜತೆಗೆ ಚರ್ಚಿಸುತ್ತೇನೆ’ ಎಂದು ತಹಶೀಲ್ದಾರ್ ಎರ‍್ರಿಸ್ವಾಮಿ ತಿಳಿಸಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.