ರೋಣ: ತಾಲ್ಲೂಕಿನ ಯಾ.ಸ.ಹಡಗಲಿ ಗ್ರಾಮದ ಸಮೀಪದ ನಿಚ್ಚನಕೇರಿ ಹಳ್ಳ ದಾಟುವಾಗ ನೀರಿನಲ್ಲಿ ಕೊಚ್ಚಿ ಹೋಗಿದ್ದ ಆರೋಗ್ಯ ಇಲಾಖೆ ಸಿಬ್ಬಂದಿ ಬಸಮ್ಮ ಗುರಿಕಾರ(34) ಅವರ ಶವ ಬುಧವಾರ ಬೆಳಿಗ್ಗೆ ಪತ್ತೆಯಾಗಿದೆ.
ಯಾ.ಸ ಹಡಗಲಿ ಗ್ರಾಮದಲ್ಲಿ ನಡೆದ ಆರೋಗ್ಯ ತಪಾಸಣೆ ಶಿಬಿರ ಮುಗಿಸಿಕೊಂಡು ಆರೋಗ್ಯ ಕೇಂದ್ರ ನಿರೀಕ್ಷಕ ವೀರಸಂಗಯ್ಯ ಹಿರೇಮಠ, ಸಮುದಾಯ ಆರೋಗ್ಯಾಧಿಕಾರಿ ಬಸವರಾಜ ಕಡಪಟ್ಟಿ, ಆರೋಗ್ಯ ಸಂರಕ್ಷಣಾಧಿಕಾರಿ ಬಸಮ್ಮ ಗುರಿಕಾರ ಅವರು ದ್ವಿಚಕ್ರ ವಾಹನದಲ್ಲಿ ನಿಚ್ಚನಕೇರಿ ಹಳ್ಳ ದಾಟುವಾಗ ಅವಘಡ ಸಂಭವಿಸಿದ್ದು, ಬಸಮ್ಮ ಗುರಿಕಾರ ಅವರು ನೀರಿನಲ್ಲಿ ಕೊಚ್ಚಿ ಹೋಗಿದ್ದರು. ಅಗ್ನಿ ಶಾಮಕ ಸಿಬ್ಬಂದಿ, ಪೊಲೀಸ್ ಇಲಾಖೆ ಹಾಗೂ ಮೃತರ ಕುಟುಂಬಸ್ಥರು ಶೋಧ ಕಾರ್ಯ ನಡೆಸಿ ಶವ ಪತ್ತೆ ಮಾಡಿದ್ದಾರೆ. ಈ ಕುರಿತು ರೋಣ ಪೋಲಿಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.