ಗದಗ: ಶನಿವಾರ ಜಿಲ್ಲೆಯ ವಿವಿಧೆಡೆ ಸುರಿದ ಗುಡುಗು ಸಿಡಿಲು ಸಹಿತ ಮಳೆಗೆ ಮೂವರು ಮೃತಪಟ್ಟಿದ್ದಾರೆ.
ಶಿರಹಟ್ಟಿ ತಾಲ್ಲೂಕಿನ ಹರಿಪುರ ಹೊರವಲಯದಲ್ಲಿ ಮಾವಿನ ತೋಟ ಕಾಯುತ್ತಿದ್ದ ಮಾಬುಸಾಬ ದೊಡ್ಡಮನಿ (55) ಹಾಗೂ ದನ ಮೇಯಿಸಲು ಹೋಗಿದ್ದ ಹರಿಪುರದ ನಿವಾಸಿ ಮುರಗೇಶ ಹೊಸಮನಿ (40) ಸಿಡಿಲು ಬಡಿದು ಸಾವನ್ನಪ್ಪಿದ್ದಾರೆ.
ಮುಂಡರಗಿ ತಾಲ್ಲೂಕಿನ ಡಂಬಳ ಹೋಬಳಿ ಹಳ್ಳಿಕೇರಿ ಗ್ರಾಮದ ಹನುಮಪ್ಪ ಸಿದ್ದಪ ಮನ್ನಾಪುರ (22) ವೆಂಕಟಾಪುರದಲ್ಲಿ ಕುರಿ ಮೇಯಿಸುತ್ತಿದ್ದಾಗ ಸಿಡಿಲು ಬಡಿದು ಮೃತಪಟ್ಟಿದ್ದಾರೆ.
ಲಕ್ಷ್ಮೇಶ್ವರ ತಾಲ್ಲೂಕಿನ ಸುತ್ತಮುತ್ತ ಆಲಿಕಲ್ಲು ಮಳೆ ಸುರಿಯಿತು. ಗದಗ ಬೆಟಗೇರಿ ಅವಳಿ ನಗರದಲ್ಲಿ ಗುಡುಗು ಸಹಿತ ತುಂತುರು ಮಳೆ ಸುರಿಯಿತು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.