ನರಗುಂದ: ಪಟ್ಟಣ ಸೇರಿದಂತೆ ತಾಲ್ಲೂಕಿನಾದ್ಯಂತ ಮಳೆ ಸುರಿದು ಜನಜೀವನ ಅಸ್ತವ್ಯಸ್ತಗೊಂಡಿತು. ಮಳೆಯಿಂದಾಗಿ ರಸ್ತೆಗಳು ಕೆಸರುಮಯವಾಗಿ ವಾಹನ ಸಂಚಾರಕ್ಕೆ ತೊಂದರೆಯಾಯಿತು.
ಅತಿಯಾದ ಮಳೆಗೆ ಈರುಳ್ಳಿ ಬೆಳೆ ಹಾನಿಯಾಗಿದ್ದು, ರೈತರು ಸಂಕಷ್ಟಕ್ಕೆ ಸಿಲುಕಿದ್ದಾರೆ. ನಿರಂತರ ಮಳೆಗೆ ಮಣ್ಣಿನ ಮನೆಗಳು ಸೋರುತ್ತಿದ್ದು, ಜನರು ಸೋರುವ ಮನೆಯಲ್ಲಿಯೇ ಕಾಲ ಕಳೆಯಬೇಕಾಗಿದೆ.
ಪ್ರವಾಹದ ಭೀತಿ:
ಸವದತ್ತಿ ಬಳಿಯ ನವಿಲುತೀರ್ಥ ಜಲಾಶಯ ಭರ್ತಿಯಾಗಿದ್ದು, ಈಗಾಗಲೇ ನಿರಂತರ 1500 ಕ್ಯೂಸೆಕ್ ನೀರು ಮಲಪ್ರಭಾ ಹೊಳೆಗೆ ಹರಿಸಲಾಗಿದೆ. ಆದರೆ ಮಲಪ್ರಭಾ ನದಿ ಮೇಲ್ಭಾಗದಲ್ಲಿ ಹೆಚ್ಚಿನ ಮಳೆ ಸುರಿಯುತ್ತಿದೆ. ಇದೇ ರೀತಿ ಮಳೆ ಮುಂದುವರೆದರೆ ಹೆಚ್ಚಿನ ನೀರು ಹೊರ ಬಿಡಬೇಕಾಗುತ್ತದೆ. ಆದ್ದರಿಂದ ಮಲಪ್ರಭಾ ಅಚ್ಚುಕಟ್ಟು ಪ್ರದೇಶದ ಗ್ರಾಮಗಳು ಪ್ರವಾಹದ ಆತಂಕ ಎದುರಿಸುವಂತಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.