ಲಕ್ಷ್ಮೇಶ್ವರ: ‘ಸ್ವಾತಂತ್ರ್ಯ ಹೋರಾಟದ ಇತಿಹಾಸವನ್ನು ವಿದ್ಯಾರ್ಥಿಗಳು ಓದಬೇಕು. ಇತಿಹಾಸ ಓದದವರು ಹೊಸ ಇತಿಹಾಸ ಸೃಷ್ಟಿಸಲು ಸಾಧ್ಯವಿಲ್ಲ’ ಎಂದು ಬಿಇಒ ಎಚ್.ಎನ್. ನಾಯಕ ಹೇಳಿದರು.
ಇಲ್ಲಿನ ದೂದಪೀರಾಂ ಸರ್ಕಾರಿ ಉರ್ದು ಪ್ರೌಢ ಶಾಲೆಯಲ್ಲಿ ತಾಲ್ಲೂಕು ಆಡಳಿತ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿ ಕಾರ್ಯಾಲಯಗಳ ವತಿಯಿಂದ 79ನೇ ಸ್ವಾತಂತ್ರ್ಯ ದಿನಾಚರಣೆ ಅಂಗವಾಗಿ ಮಂಗಳವಾರ ಹಮ್ಮಿಕೊಂಡಿದ್ದ ರಸಪ್ರಶ್ನೆ ಸ್ಪರ್ಧೆ ಉದ್ಘಾಟಿಸಿ ಅವರು ಮಾತನಾಡಿದರು.
ಮುಖ್ಯ ಶಿಕ್ಷಕ ಎಸ್.ಕೆ. ಹವಾಲ್ದಾರ್ ‘ರಸಪ್ರಶ್ನೆ ಸ್ಪರ್ಧೆಗಳು ವಿದ್ಯಾರ್ಥಿಗಳಿಗೆ ಆತ್ಮವಿಶ್ವಾಸ ತುಂಬುವ ಜತೆಗೆ ಸ್ಪರ್ಧಾತ್ಮಕ ಮನೋಭಾವ ಬೆಳೆಸುತ್ತವೆ’ ಎಂದರು.
ಬಿಆರ್‌ಪಿ ಈಶ್ವರ ಮೆಡ್ಲೇರಿ ಮಾತನಾಡಿ, ‘ಪ್ರತಿ ವರ್ಷದಂತೆ ಈ ವರ್ಷವು ಪ್ರೌಢಶಾಲೆಗಳಿಗೆ ರಸಪ್ರಶ್ನೆ ಸ್ಪರ್ಧೆ, ಪ್ರಾಥಮಿಕ ವಿಭಾಗಕ್ಕೆ ರಾಷ್ಟ್ರೀಯ ನಾಯಕರು, ದೇಶಭಕ್ತರ ವೇಷಭೂಷಣ ಸ್ಪರ್ಧೆ ಹಾಗೂ ಸ್ವಾತಂತ್ರ್ಯೋತ್ಸವ ಪರೇಡ್, ದೇಶಭಕ್ತಿಯ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ’ ಎಂದರು.
ಲಕ್ಷ್ಮೇಶ್ವರ ವ್ಯಾಪ್ತಿಯ 15 ಪ್ರೌಢ ಶಾಲಾ ವಿದ್ಯಾರ್ಥಿಗಳು ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಬಿ.ಸಿ. ಪಟ್ಟೇದ, ಎಸ್‍ಡಿಎಂಸಿ ಸದಸ್ಯ ರಿಯಾಜ್ ಮಾರಿಹಾಳ, ಸತೀಶ ಬೋಮಲೆ, ಎನ್.ಎ. ಮುಲ್ಲಾ, ಉಮೇಶ ನೇಕಾರ, ಎ.ಐ. ಮಿಯಾನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.