ಗದಗ: ಜಿಲ್ಲಾ ಉಸ್ತುವಾರಿ ಸಚಿವ ಎಚ್. ಕೆ. ಪಾಟೀಲ ಅವರ ಜುಲೈ 21, 22 ರಂದು ಗದಗ ಜಿಲ್ಲಾ ಪ್ರವಾಸ ಕೈಗೊಳ್ಳಲಿದ್ದಾರೆ.
ಜುಲೈ 21 ರಂದು ಬೆಳಿಗ್ಗೆ 8:30 ಗಂಟೆಗೆ ಹುಬ್ಬಳ್ಳಿಯಿಂದ ನರಗುಂದಕ್ಕೆ ಆಗಮಿಸಿ, ಸ್ಥಳೀಯ ಕಾರ್ಯಕ್ರಮದಲ್ಲಿ ಪಾಲ್ಗೊಳ್ಳುವರು. ನಂತರ 10:30 ಗಂಟೆಗೆ ಗದಗ ಕೆ. ಎಚ್. ಪಾಟೀಲ ವೈದ್ಯಕೀಯ ವಿಜ್ಞಾನ ಸಂಸ್ಥೆಯಲ್ಲಿ ಜರುಗುವ ವೈದ್ಯಕೀಯ ವಿಜ್ಞಾನ ವಸ್ತು ಪ್ರದರ್ಶನ ಉದ್ಘಾಟನಾ ಸಮಾರಂಭದಲ್ಲಿ ಪಾಲ್ಗೊಳುವರು. ಮಧ್ಯಾಹ್ನ 12:30 ಗಂಟೆಗೆ ಮಹಾತ್ಮಗಾಂಧಿ ಗ್ರಾಂಧಿ ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಜರುಗುವ ಮಾನವ ಹಕ್ಕುಗಳ ರಾಷ್ಟ್ರೀಯ ಸಮ್ಮೇಳನ ಉದ್ಘಾಟನಾ ಕಾರ್ಯದಲ್ಲಿ ಭಾಗವಹಿಸುವರು.
ಜುಲೈ 22 ರಂದು ಮಧ್ಯಾಹ್ನ 12 ಗಂಟೆಗೆ ಗದಗದಿಂದ ಶಿರಹಟ್ಟಿಗೆ ತೆರಳಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸಚಿವರೊಂದಿಗೆ ಶಿರಹಟ್ಟಿ ತಾಲ್ಲೂಕಿನ ಆರೋಗ್ಯ ಇಲಾಖೆಯ ವಿವಿಧ ಕಾರ್ಯಕ್ರಮಗಳ ಶಿಲಾನ್ಯಾಸ ಹಾಗು ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸುವರು. ಸಂಜೆ 5:30 ಗಂಟೆಗೆ ಗದಗ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಗದಗ ಜಿಲ್ಲಾ ಪ್ರವಾಸೋದ್ಯಮ ಅಭಿವೃದ್ಧಿ ಕುರಿತು ಪ್ರವಾಸೋದ್ಯಮ ಇಲಾಖೆ ಅಧಿಕಾರಿಗಳೊಂದಿಗೆ ಸಭೆ ಕೈಗೊಂಡು ನಂತರ ಹುಬ್ಬಳ್ಳಿಗೆ ತೆರಳಿ ಅಲ್ಲಿಂದ ರಾತ್ರಿ 10.30 ಗಂಟೆಗೆ ಬೆಂಗಳೂರಿಗೆ ಪ್ರಯಾಣ ಬೆಳಸುವರು ಎಂದು ಸಚಿವರ ಕಾರ್ಯಲಯ ಪ್ರಕಟಣೆ ತಿಳಿಸಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.