
ಪ್ರಜಾವಾಣಿ ವಾರ್ತೆ
ಚುನಾವಣೆ
ಲಕ್ಷೇಶ್ವರ: ತಾಲ್ಲೂಕಿನ ಹುಲ್ಲೂರು ಗ್ರಾಮದ ಕೃಷಿ ಪತ್ತಿನ ಸಹಕಾರ ಸಂಘದ ಚುನಾವಣೆಯಲ್ಲಿ ಅಧ್ಯಕ್ಷರಾಗಿ ಮೆಹಬೂಬಲಿ ಗಾಡಗೋಳಿ, ಉಪಾಧ್ಯಕ್ಷರಾಗಿ ಶಿವಾನಂದ ಮಾಗಡಿ ಅವರು ಅವಿರೋಧವಾಗಿ ಆಯ್ಕೆಯಾದರು.
ಅವಿರೋಧವಾಗಿ ಆಯ್ಕೆಯಾದ ಅಧ್ಯಕ್ಷ ಉಪಾಧ್ಯಕ್ಷರನ್ನು ಹೂಮಾಲೆ ಹಾಕಿ ಸನ್ಮಾನಿಸಲಾಯಿತು. ಈ ಸಂದರ್ಭದಲ್ಲಿ ಕೆಸಿಸಿ ಬ್ಯಾಂಕ್ ನಿರ್ದೇಶಕ ಜಿ.ವಿ. ಪಾಟೀಲ, ಗ್ರಾಮ ಪಂಚಾಯಿತಿ ಮಾಜಿ ಅಧ್ಯಕ್ಷ ಸತೀಶ ಗೌಡ ಪಾಟೀಲ, ಬಾಲೇಹೊಸೂರು ಕೃಷಿ ಪತ್ತಿನ ಸಹಕಾರ ಸಂಘದ ಅಧ್ಯಕ್ಷ ಬಸವರಡ್ಡಿ ಹನುಮರಡ್ಡಿ, ಶಿವಪ್ಪ ಮುದಿಯಮ್ಮನವರ, ಸದ್ದಾಂ ಹಾಲಗಿ, ಹುಲ್ಲೂರು ಗ್ರಾಮದ ಸಹಕಾರ ಸಂಘದ ಸದಸ್ಯರು ಮತ್ತು ಗ್ರಾಮದ ಮುಖಂಡರು ಹಾಜರಿದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.