ADVERTISEMENT

ಗದಗ: ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆ ಮೇಲೆ ಎಸಿಬಿ ದಾಳಿ

​ಪ್ರಜಾವಾಣಿ ವಾರ್ತೆ
Published 24 ನವೆಂಬರ್ 2021, 7:42 IST
Last Updated 24 ನವೆಂಬರ್ 2021, 7:42 IST
ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆಯಲ್ಲಿ 9 ಕೆ.ಜಿ. ಚಿನ್ನ ಮತ್ತು ₹15 ಲಕ್ಷ ನಗದು ಪತ್ತೆಯಾಗಿದೆ
ಗದಗ ಜಿಲ್ಲೆಯ ಕೃಷಿ ಇಲಾಖೆಯ ಜಂಟಿ ನಿರ್ದೇಶಕ ರುದ್ರೇಶಪ್ಪ ಮನೆಯಲ್ಲಿ 9 ಕೆ.ಜಿ. ಚಿನ್ನ ಮತ್ತು ₹15 ಲಕ್ಷ ನಗದು ಪತ್ತೆಯಾಗಿದೆ   

ಗದಗ: ಆದಾಯಕ್ಕಿಂತ ಹೆಚ್ಚು ಆಸ್ತಿ ಗಳಿಕೆ ಹಿನ್ನಲೆಯಲ್ಲಿ ಕೃಷಿ ಇಲಾಖೆ ಜಂಟಿ ನಿರ್ದೇಶಕ ರುದ್ರೇಶಪ್ಪ ಟಿ.ಎಸ್. ಅವರ ಮನೆ ಮೇಲೆ ಬುಧವಾರ ಬೆಳಿಗ್ಗೆ ಎಸಿಬಿ ದಾಳಿ ನಡೆದಿದೆ.

ದಾವಣಗೆರೆ ಜಿಲ್ಲೆ ಚನ್ನಗಿರಿ ತಾಲ್ಲೂಕಿನಲ್ಲಿರುವ ತೋಟದ ಮನೆ, ಶಿವಮೊಗ್ಗದ ಚಾಲುಕ್ಯ ನಗರದಲ್ಲಿನ ಮನೆ ಹಾಗೂ ಗದಗ ನಗರದಲ್ಲಿ ಅವರು ವಾಸವಿದ್ದ ಬಾಡಿಗೆ ಮನೆ ಮೇಲೆ ಏಕಕಾಲಕ್ಕೆ ದಾಳಿ ನಡೆದಿದೆ.

ಎಸಿಬಿ ಅಧಿಕಾರಿಗಳು ಪರಿಶೀಲನೆ ಮುಂದುವರಿಸಿದ್ದು, ಆಸ್ತಿ , ಚಿನ್ನಾಭರಣ, ನಗದು ವಶಪಡಿಸಿಕೊಂಡ ವಿವರ ಲಭ್ಯವಾಗಿಲ್ಲ.

ADVERTISEMENT
-ರುದ್ರೇಶಪ್ಪ ಟಿ.ಎಸ್.

ಇವನ್ನೂ ಓದಿ...

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.