
ಗದಗ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಸ್ವಾಮಿ ವಿವೇಕಾನಂದ ಜಯಂತಿ ಆಚರಿಸಲಾಯಿತು
ಗದಗ: ಸ್ವಾಮಿ ವಿವೇಕಾನಂದ ಅವರ ಚಿಂತನೆಗಳು ಯುವ ಪೀಳಿಗೆಯ ಮಾನಸಿಕ, ನೈತಿಕ ಮತ್ತು ಬೌದ್ಧಿಕ ಶಕ್ತಿ ರೂಪಿಸುವಲ್ಲಿ ಮಹತ್ವದ ಪಾತ್ರ ವಹಿಸುತ್ತವೆ. ವ್ಯಕ್ತಿತ್ವ ನಿರ್ಮಾಣ, ಆತ್ಮವಿಶ್ವಾಸ, ಶಿಸ್ತಿನ ಜೀವನ ಮತ್ತು ರಾಷ್ಟ್ರ ನಿರ್ಮಾಣದಲ್ಲಿ ಯುವಕರ ಪಾತ್ರ ಅತ್ಯಂತ ಮಹತ್ವದ್ದಾಗಿದ್ದು, ವಿವೇಕಾನಂದ ಅವರ ಸಂದೇಶ ಅಳವಡಿಸಿಕೊಳ್ಳಬೇಕು’ ಎಂದು ಕುಲಪತಿ ಪ್ರೊ.ಸುರೇಶ್ ವಿ. ನಾಡಗೌಡರ ಹೇಳಿದರು.
ಪಟ್ಟಣದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸ್ವಾಮಿ ವಿವೇಕಾನಂದ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.
ವಿಶ್ವವಿದ್ಯಾಲಯದ ಹಣಕಾಸು ಅಧಿಕಾರಿ ಪ್ರಶಾಂತ್ ಜಿ.ಸಿ. ಮಾತನಾಡಿದರು. ಎಂ.ಬಿ. ಚನ್ನಪ್ಪಗೌಡರ, ಸಂತೋಷಕುಮಾರ್ ಪಿ.ಕೆ., ಅಧ್ಯಾಪಕರು, ಅಧಿಕಾರಿಗಳು ಹಾಗೂ ವಿದ್ಯಾರ್ಥಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.