ಗದಗ: ಜಿಲ್ಲಾ ಯುವ ಕಾಂಗ್ರೆಸ್ ಸಮಿತಿಗೆ ನೂತನವಾಗಿ ಆಯ್ಕೆಯಾದ ಪದಾಧಿಕಾರಿಗಳ ಪದಗ್ರಹಣ ಹಾಗೂ ಯುವಧ್ವನಿ ಸಮಾವೇಶ ಜುಲೈ 12ರಂದು ಬೆಳಿಗ್ಗೆ 11ಕ್ಕೆ ನಗರದ ಸ್ವಾಮಿ ವಿವೇಕಾನಂದ ಸಭಾಭವನದಲ್ಲಿ ನಡೆಯಲಿದೆ ಎಂದು ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ ಚುನಾಯಿತ ಅಧ್ಯಕ್ಷ ಕೃಷ್ಣಗೌಡ ಎಚ್. ಪಾಟೀಲ ತಿಳಿಸಿದರು.
'ಮೂರು ತಿಂಗಳ ಹಿಂದೆ ಯುವ ಕಾಂಗ್ರೆಸ್‍ನ ಆಂತರಿಕ ಚುನಾವಣೆಯಲ್ಲಿ ರಾಜ್ಯ ಘಟಕದ ಅಧ್ಯಕ್ಷ, ಪ್ರಧಾನ ಕಾರ್ಯದರ್ಶಿ ಹಾಗೂ ಜಿಲ್ಲಾ ಘಟಕದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಆಯ್ಕೆ ಪ್ರಕ್ರಿಯೆ ನಡೆದು, ಫಲಿತಾಂಶ ಬಂದಿದೆ. ಗದಗ ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಜಿಲ್ಲೆಯಲ್ಲಿ ಆಯ್ಕೆಯಾಗಿರುವ ಜಿಲ್ಲೆ, ತಾಲ್ಲೂಕು ಹಾಗೂ ಬ್ಲಾಕ್ ಮಟ್ಟದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳ ಪದಗ್ರಹಣ ಸಮಾರಂಭ ಶನಿವಾರ ನಡೆಯಲಿದೆ’ ಎಂದು ಗುರುವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.
‘ಐಟಿ, ಬಿಟಿ ಸಚಿವ ಪ್ರಿಯಾಂಕ್ ಖರ್ಗೆ, ಜಿಲ್ಲಾ ಉಸ್ತುವಾರಿ ಸಚಿವ ಎಚ್.ಕೆ.ಪಾಟೀಲ, ಜಿಲ್ಲಾ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಹಾಗೂ ರೋಣ ಶಾಸಕ ಜಿ.ಎಸ್.ಪಾಟೀಲ, ಮಾಜಿ ಶಾಸಕರಾದ ಡಿ.ಆರ್. ಪಾಟೀಲ, ಬಿ.ಆರ್. ಯಾವಗಲ್, ಜಿ.ಎಸ್. ಗಡ್ಡದೇವರಮಠ, ರಾಮಣ್ಣ ಲಮಾಣಿ, ರಾಮಕೃಷ್ಣ ದೊಡ್ಡಮನಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಘಟಕದ ಅಧ್ಯಕ್ಷ ಮಂಜುನಾಥ ಗೌಡ, ವಿಭಾಗೀಯ ಅಧ್ಯಕ್ಷೆ ದೀಪಿಕಾ ಗೌಡ ಸೇರಿ ಹಲವರು ಭಾಗವಹಿಸುವರು’ ಎಂದು ಹೇಳಿದರು.
ಗದಗ ತಾಲ್ಲೂಕು ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ ಅಶೋಕ ಮಂದಾಲಿ, ಕರ್ನಾಟಕ ಪ್ರದೇಶ ಯುವ ಕಾಂಗ್ರೆಸ್ ಸಮಿತಿ ರಾಜ್ಯ ಪ್ರಧಾನ ಕಾರ್ಯದರ್ಶಿ ಅಕ್ಷಯ್ ಪಾಟೀಲ, ಜಿಲ್ಲಾ ಯುವ ಕಾಂಗ್ರೆಸ್ ನೂತನ ಪದಾಧಿಕಾರಿಗಳಾದ ಅನ್ವರ ನದಾಫ್, ಮಲ್ಲಪ್ಪ ದಂಡಿನ, ಸಂಗಮೇಶ ಕೆರಕಲಮಟ್ಟಿ, ರಾಘವೇಂದ್ರ ದೊಡ್ಡಮನಿ, ಮಹಮ್ಮದ ಬೆಟಗೇರಿ ಇದ್ದರು.
ಕಾಂಗ್ರೆಸ್‌ನ ಸಿದ್ಧಾಂತ ಸಮಕಾಲೀನ ವಿಚಾರಗಳು ಹಾಗೂ ಸಮಾಜಮುಖಿ ಕಾರ್ಯಗಳ ಮೂಲಕ ಜಿಲ್ಲೆಯಲ್ಲಿ ಪಕ್ಷವನ್ನು ಮತ್ತಷ್ಟು ಬಲಪಡಿಸುವ ಉದ್ದೇಶ ಹೊಂದಲಾಗಿದೆ. ಈ ನಿಟ್ಟಿನಲ್ಲಿ ಯುವಪಡೆ ಸಜ್ಜಾಗಿದೆಕೃಷ್ಣಗೌಡ ಎಚ್.ಪಾಟೀಲ ನೂತನ ಅಧ್ಯಕ್ಷ ಗದಗ ಜಿಲ್ಲಾ ಯುವ ಕಾಂಗ್ರೆಸ್ ಸಮಿತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.