
ನರಗುಂದ: ‘ಭಾರತ ದೇಶ ರಾಜಪ್ರಭುತ್ವದಿಂದ ಪ್ರಜಾಪ್ರಭುತ್ವ ರಾಷ್ಟ್ರವಾಗಿ ರೂಪುಗೊಂಡ ದಿನವೆ ಗಣರಾಜ್ಯೋತ್ಸವ. ನರೇಂದ್ರ ಮೋದಿ ಅವರು ಪ್ರಧಾನಿಯಾದ ಬಳಿಕ ಭಾರತ ದುರ್ಬಲತೆಯಿಂದ ಬಲಿಷ್ಠ ರಾಷ್ಟ್ರವಾಗಿ ಬೆಳೆದುನಿಂತಿದೆ’ ಎಂದು ಶಾಸಕ ಸಿ.ಸಿ. ಪಾಟೀಲ ಹೇಳಿದರು.
ಪಟ್ಟಣದ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಸಮಾರಂಭದಲ್ಲಿ ಮಾತನಾಡಿದರು.
ತಹಶೀಲ್ದಾರ್ ಶ್ರೀಶೈಲ ತಳವಾರ ಅವರು ಧ್ವಜಾರೋಹಣ ನೆರವೇರಿಸಿದರು. ಈ ವೇಳೆ 2024-25ನೇ ಸಾಲಿನ ಎಸ್ಎಸ್ಎಲ್‌ಸಿಯಲ್ಲಿ ಹೆಚ್ಚು ಅಂಕ ಗಳಿಸಿದ ದೇವಕ್ಕ ಹನುಮಂತ ಕಲಾರಿ, ಸವಿತಾ ನಾಯ್ಕರ, ಭಾವನಾ ಪಾಟೀಲ ಅವರಿಗೆ ₹50 ಸಾವಿರ ಸಹಾಯಧನ ನೀಡಿ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು.
ಎಸ್.ಆರ್. ಪಾಟೀಲ, ವಸಂತ ಜೋಗಣ್ಣವರ, ಎಸ್.ಜಿ. ಮುತ್ತವಾಡ, ತಾ.ಪಂ ಇಒ ಎಸ್.ಕೆ. ಇನಾಮದಾರ, ಸಿಪಿಐ ಮಂಜುನಾಥ ನಡುವಿನಮನಿ, ಪುರಸಭೆ ಮುಖ್ಯಾಧಿಕಾರಿ ಎಸ್.ಎಸ್. ಬ್ಯಾಳಿ, ಬಿಇಒ ಎಂ.ಎಚ್ ಕಂಬಳಿ, ಮಾರುತಿ ಗೊಂದಿ, ಗಿರೀಶ ದಾಸರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.