
ಶಿರಹಟ್ಟಿ: ‘ಸರ್ವಧರ್ಮ ಸಮನ್ವಯತೆ, ಸಾಮಾಜಿಕ ಸಮಾನತೆ, ದೇಶದ ಪರಂಪರೆ ಪ್ರತೀಕವಾದ ಸಂವಿಧಾನ ಸ್ವೀಕರಿಸಿದ ಪವಿತ್ರ ದಿನವೆ ಗಣರಾಜ್ಯೋತ್ಸವ’ ಎಂದು ತಹಶೀಲ್ದಾರ್ ಕೆ.ರಾಘವೇಂದ್ರ ರಾವ್ ಹೇಳಿದರು.
ಸ್ಥಳೀಯ ಎಸ್.ಎಂ. ಡಬಾಲಿ ತಾಲ್ಲೂಕು ಕ್ರೀಡಾಂಗಣದಲ್ಲಿ ಸೋಮವಾರ ತಾಲ್ಲೂಕು ಆಡಳಿತ ವತಿಯಿಂದ ಹಮ್ಮಿಕೊಂಡಿದ್ದ ಗಣರಾಜ್ಯೋತ್ಸವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ‘ದೇಶದ ಸಂವಿಧಾನ ಪರಿಪೂರ್ಣ ವೈಚಾರಿಕತೆ ಹಾಗೂ ಸಮಾನತೆಯ ತತ್ವದ ಮೇಲೆ ರೂಪಿತಗೊಂಡಿದೆ’ ಎಂದರು.
ಈ ವೇಳೆ ವಿವಿಧ ಕ್ಷೇತ್ರದ ಸಾಧಕರಿಗೆ ಗೌರವಿಸಲಾಯಿತು. ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ಕಾರ್ಯಕ್ರಮ ಜರುಗಿದವು. ಶಾಸಕ ಡಾ.ಚಂದ್ರು ಲಮಾಣಿ ಮಾತನಾಡಿದರು.
ತಾಲ್ಲೂಕು ಪಂಚಾಯಿತಿ ಇಒ ರಾಮಣ್ಣ ದೊಡ್ಡಮನಿ, ಬಿಇಒ ಎಚ್. ನಾಣಕಿ ನಾಯಕ್, ಸಿಪಿಐ ಬಿ.ವಿ. ನ್ಯಾಮಗೌಡ, ಪಿಎಸ್ಐ ಈರಪ್ಪ ರಿತ್ತಿ, ವೀರಯ್ಯ ಮಠಪತಿ ಸೇರಿದಂತೆ ಮುಂತಾದವರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.