ಶಿರಹಟ್ಟಿ: ಜಿಲ್ಲಾಧಿಕಾರಿ ಗೋವಿಂದ ರೆಡ್ಡಿ ಅವರು ತಾಲ್ಲೂಕು ಕೇಂದ್ರಕ್ಕೆ ಶುಕ್ರವಾರ ದಿಢೀರ್ ಭೇಟಿ ನೀಡಿ ಪರಿಶೀಲಿಸಿದರು.
ಸಬ್ ರಿಜಿಸ್ಟ್ರಾರ್ ಕಚೇರಿ, ಅಟಲ್ ಜೀ ಜನಸ್ನೇಹಿ ಕೇಂದ್ರ, ಚುನಾವಣಾ ಕಚೇರಿ, ಸರ್ವೇ ಇಲಾಖೆ, ಪಟ್ಟಣ ಪಂಚಾಯಿತಿ ಹಾಗೂ ಕಡತದ ರೂಂ ವೀಕ್ಷಿಸಿ, ಕಡತಗಳನ್ನು ಪರಿಶೀಲನೆ ಮಾಡಿದರು.
‘ಸಾರ್ವಜನಿಕರ ಕುಂದು–ಕೊರತೆಗಳನ್ನು ಶೀಘ್ರ ಪರಿಹರಿಸಬೇಕು. ತಾಲೂಕಿನಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರಿದ್ದು, ಸರ್ಕಾರದೊಂದಿಗೆ ಚರ್ಚಿಸಿ ಅನುದಾನದ ಕೊರತೆ ನೀಗಿಸುವ ಮೂಲಕ ಜನರಿಗೆ ಶುದ್ಧ ಕುಡಿಯುವ ನೀರು ಪೂರೈಸಲಾಗುವುದು’ ಜಿಲ್ಲಾಧಿಕಾರಿ ತಿಳಿಸಿದರು.
‘ಜಿಲ್ಲೆಯಲ್ಲಿ ಡೆಂಗಿ ತಡೆಗಟ್ಟಲು ಮುಂಜಾಗ್ರತಾ ಕ್ರಮ ಕೈಗೊಳ್ಳಲಾಗಿದೆ. ಡೆಂಗಿ ಶಂಕಿತರನ್ನು ಪರೀಕ್ಷೆಗೆ ಒಳಪಡಿಸಲಾಗುತ್ತಿದ್ದು, ಡೆಂಗಿ ಕಂಡುಬಂದರೆ ಸೂಕ್ತ ಚಿಕಿತ್ಸೆ ನೀಡಲು ಸೂಚಿಸಲಾಗಿದೆ. ಮನೆಗಳ ಸುತ್ತಮುತ್ತ ಸ್ವಚ್ಛತೆ ಕಾಪಾಡುವಂತೆ, ತೆಂಗಿನ ಚಿಪ್ಪು, ಪ್ಲಾಸ್ಟಿಕ್ ಬಾಟಲ್, ತೆಗ್ಗು ಗುಂಡಿಗಳಲ್ಲಿ ನೀರು ನಿಲ್ಲದಂತೆ ನೋಡಿಕೊಳ್ಳಲು ಸಾರ್ವಜನಿಕರಿಗೆ ತಿಳಿಸಬೇಕು’ ಎಂದು ಸೂಚಿಸಿದರು.
ಡೆಂಘೀ ಸೋಂಕು ಕಂಡುಬರುವ ಸ್ಥಳ ಗುರುತಿಸಿ, ಲಾರ್ವಾ ನಾಶ ಮಾಡಲು ಅಂಗನವಾಡಿ ಆಶಾ ಕಾರ್ಯಕರ್ತೆಯರ ಮೂಲಕ ಜಾಗೃತಿ ಮೂಡಿಸಲಾಗುತ್ತಿದೆ ಎಂದು ಹೇಳಿದರು.
ತಹಶೀಲ್ದಾರ್ ಅನಿಲ ಬಡಿಗೇರ, ಪಟ್ಟಣ ಪಂಚಾಯ್ತಿ ಮುಖ್ಯಾಧಿಕಾರಿ ಸಿದ್ದರಾಯ ಕಟ್ಟಿಮನಿ, ಕೃಷಿ ಇಲಾಖೆ ಅಧಿಕಾರಿ ರೇವಣೆಪ್ಪ ಮನಗೂಳಿ, ವಿವಿಧ ಇಲಾಖೆ ಅಧಿಕಾರಿಗಳು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.