
ಶಿರಹಟ್ಟಿ: ‘ಮೆಕ್ಕೆಜೋಳ ಬೆಂಬಲ ಬೆಲೆಗೆ ಆಗ್ರಹಿಸಿ ಲಕ್ಷ್ಮೇಶ್ವರದಲ್ಲಿ ನಡೆಸಲಾದ ಪ್ರತಿಭಟನೆಯಲ್ಲಿ ಡಾ.ಬಿ.ಆರ್. ಅಂಬೇಡ್ಕರ್ ಚಿತ್ರಕ್ಕೆ ಅವಮಾನಿಸಲಾಗಿದೆ. ತಪ್ಪಿತಸ್ಥರ ವಿರುದ್ದ ಈ ಕುರಿತು ಸೂಕ್ತ ಕಾನೂನು ಕ್ರಮ ಜರುಗಿಸಬೇಕು ಎಂದು ಒತ್ತಾಯಿಸಿ ದಲಿತ ಸಂಘರ್ಷ ಸಮಿತಿ ತಾಲ್ಲೂಕು ಘಟಕ ಕಾರ್ಯಕರ್ತರು ಉಪ ತಹಶೀಲ್ದಾರ್ ಗಿರಿಜವ್ವ ಪೂಜಾರ ಅವರಿಗೆ ಬುಧವಾರ ಮನವಿ ಸಲ್ಲಿಸಿದರು.
ಸಂಘಟನೆ ಮುಖಂಡ ಮುತ್ತುರಾಜ ಭಾವಿಮನಿ ಹಾಗೂ ನಾಗರಾಜ ಲಕ್ಕುಂಡಿ ಮಾತನಾಡಿ, ‘ಹೋರಾಟದ ವೇಳೆ ಬಿ.ಆರ್ ಅಂಬೇಡ್ಕರ್ ಅವರ ಚಿತ್ರದ ಕಡೆ ಕಾಲು ತೋರಿಸಿ ಅವಮಾನಿಸಿದ ವ್ಯಕ್ತಿಯ ಮೇಲೆ ಸೂಕ್ತ ಕಾನೂನು ಕ್ರಮ ಜರುಗಿಸಬೇಕು’ ಎಂದು ಒತ್ತಾಯಿಸಿದರು.
ಜಾನು ಲಮಾಣಿ, ಪ್ರಕಾಶ ಬಡೆಣ್ಣವರ, ಸಂತೋಷ ಗುಡಿಮನಿ, ಶಿವು ಲಮಾಣಿ, ಈರಪ್ಪ ಲಮಾಣಿ, ಮಂಜು ಗುಡಿಮನಿ, ಶಿವಪ್ಪ ಲಮಾಣಿ, ಪುಂಡಲೀಕ ಲಮಾಣಿ, ಸೋಮರಡ್ಡಿ ಲಮಾಣಿ, ತಿಪ್ಪಣ್ಣ ಲಮಾಣಿ, ಲಿಂಬಣ್ಣ ಲಮಾಣಿ, ಕುಮಾರ ಲಮಾಣಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.