
ಗದಗ: ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ 2025-2026ನೇ ಸಾಲಿಗೆ ಮಹಿಳಾ ಘಟಕದ ನೂತನ ಅಧ್ಯಕ್ಷರಾಗಿ ಜ್ಯೋತಿ ರಾಮನಗೌಡ ದಾನಪ್ಪಗೌಡ್ರ ಅಧಿಕಾರ ಸ್ವೀಕರಿಸಿದರು.
ಪ್ರಥಮ ಉಪಾಧ್ಯಕ್ಷರಾಗಿ ಸುಜಾತಾ ಶರಣಬಸಪ್ಪ ಗುಡಿಮನಿ, ದ್ವಿತೀಯ ಉಪಾಧ್ಯಕ್ಷರಾಗಿ ನಾಗರತ್ನಾ ಎಸ್. ಮುಳಗುಂದ ಹಾಗೂ ತೃತೀಯ ಉಪಾಧ್ಯಕ್ಷರಾಗಿ ಪಾರ್ವತಿ ಪಶುಪತಯ್ಯ ಶಾಬಾದಿಮಠ, ಗೌರವ ಕಾರ್ಯದರ್ಶಿಯಾಗಿ ಪೂರ್ಣಿಮಾ ಕೆ. ಆಟದ, ಸಹ ಗೌರವ ಕಾರ್ಯದರ್ಶಿಯಾಗಿ ಸುಧಾ ಚನ್ನವೀರಪ್ಪ ಹುಣಸಿಕಟ್ಟಿ, ಶಿಲ್ಪಾ ತೋಂಟೇಶ ವೀರಲಿಂಗಯ್ಯನಮಠ, ಕೋಶಾಧ್ಯಕ್ಷರಾಗಿ ರೇಣುಕಾ ಲಿಂಗರಾಜ ಅಮಾತ್ಯ ಅಧಿಕಾರ ಸ್ವೀಕರಿಸಿದರು.
ಮುಖ್ಯ ಅತಿಥಿಯಾಗಿ ಭಾಗವಹಿಸಿದ್ದ ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಅಧ್ಯಕ್ಷ ಶರಣಬಸಪ್ಪ ಸಂಗಪ್ಪ ಗುಡಿಮನಿ ಮಾತನಾಡಿ, ‘ಗದಗ ಜಿಲ್ಲಾ ವಾಣಿಜ್ಯೋದ್ಯಮ ಸಂಸ್ಥೆಯ ಮಹಿಳಾ ಘಟಕವು ಸಕ್ರಿಯವಾಗಿದ್ದು, ಇನ್ನೂ ಹೆಚ್ಚಿನ ರೀತಿಯಲ್ಲಿ ಕಾರ್ಯಕ್ರಮ ಹಮ್ಮಿಕೊಂಡು ಮುನ್ನಡೆಯಬೇಕು. ಇದಕ್ಕೆ ನಮ್ಮ ಸಹಕಾರ ಸದಾ ಇರಲಿದೆ’ ಎಂದರು.
ಇದೇ ಸಂದರ್ಭದಲ್ಲಿ ಶರಣಬಸಪ್ಪ ಸಂಗಪ್ಪ ಗುಡಿಮನಿ ಹಾಗೂ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾ ಸಂಸ್ಥೆಯಿಂದ ಅಂತರರಾಷ್ಟ್ರೀಯ ಮಹಿಳಾ ಉದ್ದಿಮೆದಾರರ ಸಮ್ಮೇಳನದಲ್ಲಿ ಪ್ರಶಸ್ತಿ ಪುರಸ್ಕೃತರಾದ ಪಾರ್ವತಿ ಪಶುಪತಯ್ಯ ಶಾಬಾದಿಮಠ ಅವರನ್ನು ಸನ್ಮಾನಿಸಲಾಯಿತು.
ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಸುವರ್ಣ ಸದಾಶಿವಯ್ಯ ಮದರಿಮಠ ನಿರೂಪಣೆ ಮಾಡಿದರು. ಮಹಿಳಾ ಘಟಕದ ಮಾಜಿ ಅಧ್ಯಕ್ಷೆ ಜಯಶ್ರೀ ತಾತನಗೌಡ ಪಾಟೀಲ ವಂದಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.