
ಲಕ್ಷ್ಮೇಶ್ವರ: ‘ತಾಲ್ಲೂಕಿನ ಎರಡನೇ ಕನ್ನಡ ಸಾಹಿತ್ಯ ಸಮ್ಮೇಳನವನ್ನು ಇತಿಹಾಸ ಪ್ರಸಿದ್ಧ ಕೋಟೆ ಗ್ರಾಮ ಯಳವತ್ತಿಯಲ್ಲಿ ಫೆಬ್ರುವರಿ 14ರಂದು ಹಮ್ಮಿಕೊಳ್ಳಲಾಗಿದೆ. ಎಲ್ಲರೂ ಸಂಭ್ರಮಿಸಿ ಯಶಸ್ವಿಗೊಳಿಸಬೇಕು’ ಎಂದು ಶಿರಹಟ್ಟಿ ಮತಕ್ಷೇತ್ರದ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
ಸಮ್ಮೇಳನದ ಪೂರ್ವಭಾವಿಯಾಗಿ ತಹಶೀಲ್ದಾರ್ ಕಾರ್ಯಾಲಯದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಹಂತದ ಅಧಿಕಾರಿಗಳ ಸಭೆಯಲ್ಲಿ ಸಮ್ಮೇಳನದ ಲಾಂಛನ ಅನಾವರಣಗೊಳಿಸಿ ಮಾತನಾಡಿದರು.
ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಯಳವತ್ತಿ ಗ್ರಾಮಸ್ಥರು ಸಮ್ಮೇಳನದ ಪೂರ್ವಸಿದ್ಧತೆಯ ಕುರಿತು ಸಭೆಗೆ ಮಾಹಿತಿ ನೀಡಿದರು.
ತಹಶೀಲ್ದಾರ್ ಧನಂಜಯ ಎಂ., ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ ಧರ್ಮರ, ವಿವಿಧ ಇಲಾಖೆಗಳ ತಾಲ್ಲೂಕು ಮಟ್ಟದ ಅಧಿಕಾರಿಗಳು, ಕನ್ನಡ ಸಾಹಿತ್ಯ ಪರಿಷತ್ ಲಕ್ಷ್ಮೇಶ್ವರ ತಾಲೂಕ ಘಟಕದ ಅಧ್ಯಕ್ಷರು, ಪದಾಧಿಕಾರಿಗಳು, ಸಲಹಾ ಸಮಿತಿಯ ಸದಸ್ಯರು ಹಾಗೂ ಯಳವತ್ತಿ ಗ್ರಾಮಸ್ಥರು ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.