
ಪ್ರಜಾವಾಣಿ ವಾರ್ತೆ
ಲಲಿತಕ್ಕ ಕೆರಿಮನಿ
ಲಕ್ಷ್ಮೇಶ್ವರ: ಪಟ್ಟಣದ ಮಹಿಳಾ ಸಾಹಿತಿ ಲಲಿತಕ್ಕ ಕೆರಿಮನಿ ಅವರಿಗೆ ಗದಗ ಜಿಲ್ಲಾ ಬರಹಗಾರರ ಬಳಗ ವತಿಯಿಂದ ಕನ್ನಡಶ್ರೀ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಲಲಿತಕ್ಕ ಅವರು ಪಾರ್ವತಿ ಮಕ್ಕಳ ಬಳಗದ ರೇಣುಕಾಚಾರ್ಯ ಸಂಸ್ಕೃತ ಪಾಠ ಶಾಲೆಯಲ್ಲಿ ಮೂರು ದಶಕಗಳ ಕಾಲ ಶಿಕ್ಷಕಿಯಾಗಿ ಸೇವೆ ಸಲ್ಲಿಸಿದ್ದಾರೆ. ಇದುವರೆಗೆ ನಾಲ್ಕು ಪುಸ್ತಕ ರಚಿಸಿದ್ದು, ಎರಡು ಪುಸ್ತಕಗಳ ಸಂಪಾದಕರಾಗಿ ಕಾರ್ಯ ನಿರ್ವಹಿಸಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.