ADVERTISEMENT

ಮಹದಾಯಿ ಸಮಸ್ಯೆ ಬಗೆಹರಿಯುವ ವಿಶ್ವಾಸ: ಸಭಾಪತಿ ಬಸವರಾಜ ಹೊರಟ್ಟಿ

​ಪ್ರಜಾವಾಣಿ ವಾರ್ತೆ
Published 30 ಜುಲೈ 2021, 16:50 IST
Last Updated 30 ಜುಲೈ 2021, 16:50 IST

ಗದಗ: ‘ಉತ್ತರ ಕರ್ನಾಟಕದ ಸಮಸ್ಯೆಗಳ ಬಗ್ಗೆ ಅರಿವು ಇರುವ ಬಸವರಾಜ ಬೊಮ್ಮಾಯಿ ಈಗ ಮುಖ್ಯಮಂತ್ರಿ ಆಗಿದ್ದು, ಸಮಸ್ಯೆ ಪರಿಹರಿಸಲು ಕ್ರಮವಹಿಸುತ್ತಾರೆ ಎಂಬ ಭರವಸೆ ಇದೆ’ ಎಂದು ವಿಧಾನಪರಿಷತ್‌ ಸಭಾಪತಿ ಬಸವರಾಜ ಹೊರಟ್ಟಿ ಹೇಳಿದರು.

ಶುಕ್ರವಾರ ಗದುಗಿನಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆಗೆ ಮಾತನಾಡಿದ ಅವರು, ‘ಬಸವರಾಜ ಬೊಮ್ಮಾಯಿ ಮಹದಾಯಿ ಸಲುವಾಗಿ ಸಾಕಷ್ಟು ಹೋರಾಟ ಮಾಡಿದ್ದಾರೆ. ಪಾದಯಾತ್ರೆ ಕೂಡ ನಡೆಸಿದ್ದಾರೆ. ಈಗ ಅವರೇ ಮುಖ್ಯಮಂತ್ರಿ ಆಗಿರುವುದರಿಂದ ಇವೆಲ್ಲವಕ್ಕೂ ನ್ಯಾಯ ಸಿಗಲಿದೆ ಎಂದು ನಂಬಿದ್ದೇನೆ’ ಎಂದು ಹೇಳಿದರು.

ಬೆಳಗಾವಿಯಲ್ಲಿ ಅಧಿವೇಶನ ನಡೆಸುವುದರ ಬಗ್ಗೆ ಪ್ರತಿಕ್ರಿಯಿಸಿದ ಅವರು, ‘ಈ ಬಗ್ಗೆ ಕ್ಯಾಬಿನೆಟ್‌ನಲ್ಲಿ ನಿರ್ಣಯ ತೆಗೆದುಕೊಳ್ಳಬೇಕು. ಕೊರೊನಾ ಸೋಂಕು ಕಡಿಮೆ ಆಗಿದೆ. ಆದರೆ, ಮಳೆಗಾಲ ಆರಂಭಗೊಂಡಿದೆ. ಇವುಗಳ ಸಾಧಕ ಬಾಧಕ ನೋಡಿಕೊಂಡು ಮುಂದಿನ ಅಧಿವೇಶನವನ್ನು ಬೆಳಗಾವಿಯಲ್ಲೇ ನಡೆಸುವ ವಿಶ್ವಾಸ ಇದೆ‌’ ಎಂದು ಹೇಳಿದರು.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.