ಮುಂಡರಗಿ: ತಾಲ್ಲೂಕಿನ ಎಸ್ಎಸ್ಎಲ್‌ಸಿ ಪರೀಕ್ಷಾ ಫಲಿತಾಂಶವು ಶೇ 63.40ರಷ್ಟಾಗಿದ್ದು, ತಾಲ್ಲೂಕಿನ ಕೊರ್ಲಹಳ್ಳಿ ಗ್ರಾಮದ ಆದರ್ಶ ವಿದ್ಯಾಲಯದ ಕಾವ್ಯಾ ಉಪ್ಪಾರ ಶೇ 99.52 ಅಂಕ ಗಳಿಸಿ ತಾಲ್ಲೂಕಿಗೆ ಪ್ರಥಮ ಸ್ಥಾನ ಪಡೆದಿದ್ದಾಳೆ.
ಪಟ್ಟಣದ ಜಗದ್ಗುರು ಅನ್ನದಾನೀಶ್ವರ ಆಂಗ್ಲ ಮಾಧ್ಯಮ ಪ್ರೌಢ ಶಾಲೆಯ ವಿದ್ಯಾರ್ಥಿ ಆದರ್ಶ ಕಳ್ಳಿ ಶೇ 98.88 ಅಂಕ ಗಳಿಸಿ ತಾಲ್ಲೂಕಿಗೆ ದ್ವಿತೀಯ ಸ್ಥಾನ ಪಡೆದುಕೊಂಡಿದ್ದಾನೆ. ಹಿರೇವಡ್ಡಟ್ಟಿ ಗ್ರಾಮದಲ್ಲಿರುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ವಿದ್ಯಾರ್ಥಿ ಲಂಕೇಶ ಬೋರಿನ್, ಪಟ್ಟಣದ ಎಸ್.ಎಫ್.ಎಸ್ ಪ್ರೌಢ ಶಾಲೆಯ ವಿದ್ಯಾರ್ಥಿ ಸಂದೇಶ ನವಲಗುಂದ ಮತ್ತು ಪ್ರತೀಕ್ಷಾ ನಾಯ್ಕ್ ಶೇ 98.56 ಅಂಕ ಗಳಿಸಿ ತೃತೀಯ ಸ್ಥಾನ ಪಡೆದುಕೊಂಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.