ADVERTISEMENT

‘ದಂಡ ವಿಧಿಸುವುದರ ಜತೆಗೆ ಮಾಸ್ಕ್‌ ನೀಡಿ’

​ಪ್ರಜಾವಾಣಿ ವಾರ್ತೆ
Published 9 ಮೇ 2021, 4:29 IST
Last Updated 9 ಮೇ 2021, 4:29 IST
ವಿಶ್ವನಾಥ ಖಾನಾಪುರ
ವಿಶ್ವನಾಥ ಖಾನಾಪುರ   

ಗದಗ: ಜಿಲ್ಲೆಯಲ್ಲಿ ಕೋವಿಡ್‌–19 ಪ್ರಕರಣಗಳು ಹೆಚ್ಚುತ್ತಿದ್ದು, ನಿಯಂತ್ರಿಸುವ ನಿಟ್ಟಿನಲ್ಲಿ ಪೊಲೀಸ್‌ ಇಲಾಖೆ ಕಠಿಣ ಕ್ರಮಕ್ಕೆ ಮುಂದಾಗಿದೆ. ಸಾರ್ವಜನಿಕ ‍ಪ್ರದೇಶದಲ್ಲಿ ಮಾಸ್ಕ್‌ ಧರಿಸದೇ ಅಡ್ಡಾಡುವವರಿಗೆ ಪೊಲೀಸರು ದಂಡ ವಿಧಿಸುವುದರ ಜತೆಗೆ ಒಂದೊಂದು ಮಾಸ್ಕ್‌ ಕೂಡ ನೀಡಿ ಅವರಲ್ಲಿ ಜಾಗೃತಿ ಮೂಡಿಸಬೇಕು ಎಂದು ನಾಗರಿಕ ಕಾಳಜಿ ಸಂಸ್ಥೆಯ ವಿಶ್ವನಾಥ ಖಾನಾಪುರ ಆಗ್ರಹಿಸಿದ್ದಾರೆ.

ಕೋವಿಡ್‌ ಪಾಸಿಟಿವ್‌ ಬಂದಿರುವ ವ್ಯಕ್ತಿಯ ಮನೆಯವರ ಯೋಗಕ್ಷೇಮವನ್ನು ಜಿಲ್ಲಾಡಳಿತ ಹಾಗೂ ಜಿಲ್ಲಾ ಆರೋಗ್ಯ ಇಲಾಖೆ ಅಚ್ಚುಕಟ್ಟಾಗಿ ವಿಚಾರಿಸುತ್ತಿದೆ. ಆದರೆ, ಅವರಿಗೆ ಮನೆಯಲ್ಲಿ ಚಿಕಿತ್ಸೆ ನೀಡುವ ಬದಲಾಗಿ ಕೋವಿಡ್‌ ಕೇರ್‌ ಸೆಂಟರ್‌ಗೆ ವರ್ಗಾಯಿಸಿದರೆ ಓಣಿಯಲ್ಲಿ ಕೊರೊನಾ ಹರಡುವುದನ್ನು ನಿಯಂತ್ರಿಸಬಹುದು. ಕೋವಿಡ್‌ ಕೇರ್‌ ಸೆಂಟರ್‌ಗಳನ್ನು ಕಲ್ಯಾಣ ಮಂಟಪ, ಶಾಲೆ, ಸಭಾಭವನದಲ್ಲಿ ಸ್ಥಾಪಿಸಿದರೆ ಉತ್ತಮ ಎಂದು ಅವರು ತಿಳಿಸಿದ್ದಾರೆ.

ಅಗತ್ಯ ವಸ್ತುಗಳ ಖರೀದಿಗೆ ಬೆಳಿಗ್ಗೆ ಮಾತ್ರ ಅವಕಾಶ ಕಲ್ಪಿಸಲಾಗಿದೆ. ನಂತರದ ಸಮಯದಲ್ಲಿ ಅಂಗಡಿಗಳು, ಮಾರುಕಟ್ಟೆಗಳಿಗೆ ಸ್ಯಾನಿಟೈಸ್‌ ಮಾಡಿಸಿದರೆ ಸೋಂಕು ಹರಡುವುದನ್ನು ಪರಿಣಾಮಕಾರಿಯಾಗಿ ನಿಯಂತ್ರಿಸಬಹುದು ಎಂದು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.