ADVERTISEMENT

ಕ್ರೀಡಾ ಯೋಜನೆ ಸದುಪಯೋಗ ಪಡೆದುಕೊಳ್ಳಿ: ಶಾಸಕ ಡಾ.ಚಂದ್ರು

ಕ್ರೀಡಾಕೂಟ ಉದ್ಘಾಟನೆ: ಶಾಸಕ ಡಾ. ಚಂದ್ರು ಲಮಾಣಿ ಸಲಹೆ

​ಪ್ರಜಾವಾಣಿ ವಾರ್ತೆ
Published 2 ಸೆಪ್ಟೆಂಬರ್ 2025, 3:03 IST
Last Updated 2 ಸೆಪ್ಟೆಂಬರ್ 2025, 3:03 IST
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು
ಮುಂಡರಗಿಯ ಜಗದ್ಗುರು ಅನ್ನದಾನೀಶ್ವರ ಕಾಲೇಜು ಕ್ರೀಡಾಂಗಣದಲ್ಲಿ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟವನ್ನು ಗಣ್ಯರು ಉದ್ಘಾಟಿಸಿದರು   

ಮುಂಡರಗಿ: ‘ಖೇಲೋ ಇಂಡಿಯಾ ಸೇರಿದಂತೆ ಕೇಂದ್ರ ಸರ್ಕಾರ ಹಲವು ಕ್ರೀಡಾ ಯೋಜನೆಗಳನ್ನು ಜಾರಿಗೆ ತಂದಿದ್ದು, ಕ್ರೀಡಾಪಟುಗಳು ಸದುಪಯೋಗ ಪಡೆದುಕೊಳ್ಳಬೇಕು’ ಎಂದು ಶಾಸಕ ಡಾ.ಚಂದ್ರು ಲಮಾಣಿ ಸಲಹೆ ನೀಡಿದರು.

ಸ್ಥಳೀಯ ಜಗದ್ಗುರು ಅನ್ನದಾನೀಶ್ವರ ಕಾಲೇಜು ಕ್ರೀಡಾಂಗಣದಲ್ಲಿ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಸರ್ಕಾರಿ ಪದವಿ ಪೂರ್ವ ಕಾಲೇಜು ಸೋಮವಾರ ಹಮ್ಮಿಕೊಂಡಿದ್ದ ತಾಲ್ಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟದಲ್ಲಿ ಅವರು ಮಾತನಾಡಿದರು.

ಕ್ರೀಡೆಗಳು ದೈಹಿಕ ಹಾಗೂ ಮಾನಸಿಕ ಆರೋಗ್ಯದ ಮೇಲೆ ಸಕಾರಾತ್ಮಕ ಪರಿಣಾಮ ಬೀರುತ್ತವೆ. ಕ್ರೀಡೆಗಳಲ್ಲಿ ಸಾಧನೆ ಮಾಡಿದವರಿಗೆ ಸರ್ಕಾರ ವಿಶೇಷ ಸವಲತ್ತುಗಳನ್ನು ನೀಡುತ್ತಿದೆ ಎಂದರು.

ADVERTISEMENT

ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರು ಮಾತನಾಡಿ, ‘ಸಾಮಾಜಿಕ ಮಾಧ್ಯಮ ಭರಾಟೆಯಲ್ಲಿ ಯುವಕರಲ್ಲಿ ಕ್ರೀಡಾಸಕ್ತಿ ಕಡಿಮೆಯಾಗುತ್ತಿರುವುದು ದುರ್ದೈವದ ಸಂಗತಿ’ ಎಂದು ವಿಷಾಧಿಸಿದರು.

ಪ್ರಾಚಾರ್ಯ ಫಕೀರಸಾಬ ಕಲಕೇರಿ ಪ್ರಾಸ್ತಾವಿಕ ಮಾತನಾಡಿದರು. ಉಪನ್ಯಾಸಕಿ ಅರುಣಾ ಗುಜ್ಜರಿ ನಿರೂಪಿಸಿದರು. ಆನಂದರಡ್ಡಿ ಮ್ಯಾಗೇರಿ ವಂದಿಸಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಗಂಗಾಧರ ಅಣ್ಣಿಗೇರಿ, ಪುರಸಭೆ ಉಪಾಧ್ಯಕ್ಷ ನಾಗೇಶ ಹುಬ್ಬಳ್ಳಿ, ಮುಖಂಡರಾದ ಕೊಟ್ರೇಶ ಅಂಗಡಿ, ಆನಂದಗೌಡ ಪಾಟೀಲ, ಕುಮಾರಸ್ವಾಮಿ ಹಿರೇಮಠ, ಮಂಜುನಾಥ ಮುಧೋಳ, ಬಸವರಾಜ ಬಿಳಿಮಗ್ಗದ, ಮೈಲಾರಪ್ಪ ಕಲಕೇರಿ, ಮಹೇಶ ನಾಗರಹಳ್ಳಿ, ಸುಭಾಸ ಗುಡಿಮನಿ, ಮಾರುತಿ ನಾಗರಹಳ್ಳಿ, ದೇವು ಹಡಪದ, ನಾಗರಾಜ ಮುರಡಿ, ಪವಿತ್ರಾ ಕಲ್ಲಕುಟಗರ, ಬಸವರಾಜ ಚಿಗಣ್ಣವರ, ಯಲ್ಲಪ್ಪ ಗಣಾಚಾರಿ, ಶಂಕರ ಉಳ್ಳಾಗಡ್ಡಿ, ರವಿ ಲಮಾಣಿ, ಅಶೋಕ ಚೂರಿ, ಪರುಶುರಾಮ ಸುಣಗಾರ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.