
ನರಗುಂದ: ‘ಭಾರತ ಸರ್ಕಾರ ವೀರರಾಣಿ ಕಿತ್ತೂರು ಚನ್ನಮ್ಮ ಅವರನ್ನು ಭಾರತದ ಮೊದಲ ಮಹಿಳಾ ಸ್ವಾತಂತ್ರ್ಯ ಸೇನಾನಿ ಎಂದು ಘೋಷಿಸಬೇಕು’ ಎಂದು ಸರ್ಕಾರಿ ಪದವಿ ಪೂರ್ವ ಮಹಾವಿದ್ಯಾಲಯದ ಉಪನ್ಯಾಸಕಿ ಎಸ್.ಬಿ. ಮೆಳವಂಕಿ ಆಗ್ರಹಿಸಿದರು.
ತಾಲ್ಲೂಕಿನ ಭೈರನಹಟ್ಟಿ ದೊರೆಸ್ವಾಮಿ ವಿರಕ್ತಮಠದಲ್ಲಿ ಕನ್ನಡ ಸಾಹಿತ್ಯ ಮತ್ತು ಸಾಂಸ್ಕೃತಿಕ ವೇದಿಕೆ, ಗುರು ಬ್ರಹ್ಮಾನಂದ ಶಿವಾನುಭವ ಧರ್ಮಸಂಸ್ಥೆ ವತಿಯಿಂದ ಶುಕ್ರವಾರ ನಡೆದ ವೀರರಾಣಿ ಕಿತ್ತೂರು ಚನ್ನಮ್ಮ ಜಯಂತಿ ಹಾಗೂ ಮಾಸಿಕ ಶಿವಾನುಭವ ಕಾರ್ಯಕ್ರಮದಲ್ಲಿ ಮಾತನಾಡಿದರು.
ಈ ಕುರಿತು ಕಳೆದ ವರ್ಷ ಭೈರನಹಟ್ಟಿ ಶಾಂತಲಿಂಗ ಸ್ವಾಮೀಜಿ ಕಿತ್ತೂರು ವಿಜಯೋತ್ಸವದ ಅಂಗವಾಗಿ ಹಾಗೂ ತಹಶೀಲ್ದಾರರ ಮೂಲಕ ಪ್ರಧಾನ ಮಂತ್ರಿ, ಮುಖ್ಯ ಮಂತ್ರಿಗಳಿಗೆ ಮನವಿ ಸಲ್ಲಿಸಲಾಗಿದೆ. ಆದರೂ ಸರ್ಕಾರ ಪರಿಗಣಸದೆ ಇರುವುದು ಕನ್ನಡಿಗರ ನೋವಿಗೆ ಕಾರಣವಾಗಿದೆ. ರಾಜ್ಯ, ಕೇಂದ್ರ ಸರ್ಕಾರ ರಾಣಿ ಚನ್ನಮ ಅವರಿಗೆ ಗೌರವ ನೀಡಬೇಕು ಎಂದು ಆಗ್ರಹಿಸಿದರು.
ಕಪ್ಪತ್ತಗಿರಿ ಪೌಂಡೇಶನ್ ಸಂಸ್ಥಾಪಕ ಅಧ್ಯಕ್ಷೆ ಚಂದ್ರಕಲಾ ಇಟಗಿಮಠ ಕಾರ್ಯಕ್ರಮ ಉದ್ಘಾಟಿಸಿದರು. ಶಾಂತಲಿಂಗ ಸ್ವಾಮೀಜಿ ಮಾತನಾಡಿದರು. ಈ ವೇಳೆ ಪ್ರಭಾವತಿ ನೆಗಳೂರು, ಶಾಂತಾ ಕುಪಸ್ತ ಸನ್ಮಾನಿಸಲಾಯಿತು. ಕವಿತಾ ಮೊರಬದ, ಪುಷ್ಪಾ ಪಾಟೀಲ, ರಾಜುಗೌಡ ಕೆಂಚನಗೌಡ್ರ, ಬಿ.ಬಿ. ಐನಾಪೂರ, ಚಂದ್ರು ದಂಡಿನ, ಇಸಾಕ್ ಮಸೂತಿಮನಿ, ಪ್ರಾಚಾರ್ಯ ಕೆ.ಎಂ. ಮಾಕನ್ನವರ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.