
ಗದಗ: ‘ವಿದ್ಯಾರ್ಥಿಗಳು ಜೀವನದ ಮುಂದಿನ ಹಂತಕ್ಕೆ ಕಾಲಿಡುವ ಈ ಸಂದರ್ಭದಲ್ಲಿ ಜ್ಞಾನ, ಕೌಶಲ ಹಾಗೂ ಮಾನವೀಯ ಮೌಲ್ಯಗಳನ್ನು ಸಮಾಜದ ಸೇವೆಗೆ ಬಳಸಬೇಕಾಗಿದೆ. ಈ ವಿಶ್ವವಿದ್ಯಾಲಯ ನಿಮ್ಮ ಬದುಕಿನಲ್ಲಿ ಶಾಶ್ವತ ಸ್ಫೂರ್ತಿಯಾಗಿ ಉಳಿಯಲಿ’ ಎಂದು ಪ್ರಭಾರ ಕುಲಪತಿ ಪ್ರೊ. ಸುರೇಶ ವಿ. ನಾಡಗೌಡರ ಹೇಳಿದರು.
ನಗರದ ಮಹಾತ್ಮಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್ ವಿಶ್ವವಿದ್ಯಾಲಯದ ಕೌಶಲ್ಯ ವಿಕಾಸ ಭವನದಲ್ಲಿ 2023–25ನೇ ಸಾಲಿನ ಅಂತಿಮ ವರ್ಷದ ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಆಯೋಜಿಸಿದ್ದ ‘ಸವಿನೆನಪು’ ಬೀಳ್ಕೊಡುಗೆ ಸಮಾರಂಭ ಉದ್ಘಾಟಿಸಿ ಮಾತನಾಡಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದ ಕುಲಸಚಿವ ಪ್ರೊ. ಬಸವರಾಜ ಲಕ್ಕಣ್ಣವರ ಮಾತನಾಡಿ, ‘ಯುವಕರು ಶಿಸ್ತು ಮತ್ತು ನಿಶ್ಚಿತ ಗುರಿಯೊಂದಿಗೆ ಮುಂದೆ ಸಾಗಿದಾಗ ಯಶಸ್ಸು ಸಿಗುತ್ತದೆ’ ಎಂದು ಹೇಳಿದರು.
ಕಾರ್ಯಕ್ರಮದ ಭಾಗವಾಗಿ ವಿಶ್ವವಿದ್ಯಾಲಯದ ವಿವಿಧ ಚಟುವಟಿಕೆಯಲ್ಲಿ ಭಾಗವಹಿಸಿ ವಿಜೇತರಾದ ವಿದ್ಯಾರ್ಥಿಗಳಿಗೆ ಪ್ರಶಸ್ತಿ, ಪ್ರಮಾಣಪತ್ರಗಳನ್ನು ವಿತರಿಸಲಾಯಿತು.
ಪ್ರೊ. ಅಬ್ದುಲ್ ಅಜೀಜ್ ಮುಲ್ಲ, ಪ್ರೊ. ಗಿರೀಶ್ ದೀಕ್ಷಿತ್, ಮೃತ್ಯುಂಜಯ ಮೆಣಸಿನಕಾಯಿ, ವಿಶೇಷ ಅಧಿಕಾರಿ ಉಮೇಶ್ ಬಾರಕೇರ ವೇದಿಕೆಯಲ್ಲಿದ್ದರು.
ಸಮಾಜಕಾರ್ಯ ವಿಭಾಗದ ಕಾರ್ಯಕ್ರಮ ಸಂಯೋಜಕ ಸೋಮಲಿಂಗ ಕರಣಿ, ವಿಶೇಷಾಧಿಕಾರಿ ಮಂಜುನಾಥ ಚೆನ್ನಪ್ಪಗೌಡರ, ಸಾರ್ವಜನಿಕ ಆರೋಗ್ಯ ವಿಭಾಗದ ಕಾರ್ಯಕ್ರಮ ಸಂಯೋಜಕಿ ಪ್ರೊ. ಅರ್ಚನಾ ಎನ್.ಎಲ್. ಬೀಳ್ಕೊಡುಗೆ ಸಮಾರಂಭವನ್ನು ಸಂಯೋಜಿಸಿದ್ದರು.
ವಿಶ್ವವಿದ್ಯಾಲಯದ ಬೋಧಕ ಹಾಗೂ ಬೋಧಕೇತರ ಸಿಬ್ಬಂದಿ ಮತ್ತು ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು.
ವಿದ್ಯಾಭ್ಯಾಸ ಎನ್ನುವುದು ಕೇವಲ ಪದವಿ ಪಡೆಯುವುದಕ್ಕಷ್ಟೇ ಸೀಮಿತವಲ್ಲ ಕಲಿತ ಜ್ಞಾನವನ್ನು ಸಮಾಜದ ಪರಿವರ್ತನೆಗೆ ಬಳಸುವ ಜವಾಬ್ದಾರಿಯಾಗಿದೆ–ಪ್ರೊ. ವಿಷ್ಣುಕಾಂತ ಎಸ್.ಚಟಪಲ್ಲಿ ವಿಶ್ರಾಂತ ಕುಲಪತಿ
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.