
ಪ್ರಜಾವಾಣಿ ವಾರ್ತೆ
ನರಗುಂದ: ನರಗುಂದ ಮಾರ್ಗವಾಗಿ ಕುಷ್ಟಗಿ- ಯಲ್ಲಮ್ಮನಗುಡ್ಡ, ಗೋಕಾಕ
ರೈಲ್ವೆ ಮಾರ್ಗ ಪ್ರಾರಂಭ ಮಾಡಬೇಕೆಂದು ಆಗ್ರಹಿಸಿ ಶಾಸಕ ಸಿ.ಸಿ.ಪಾಟೀಲ ಅವರು ಕೇಂದ್ರ ಸಚಿವ ಪ್ರಲ್ಹಾದ ಜೋಶಿ ಅವರಿಗೆ ಮನವಿ ಸಲ್ಲಿಸಿದರು.
ಹುಬ್ಬಳ್ಳಿಯಲ್ಲಿ ಸಚಿವರನ್ನು ಭೇಟಿಯಾಗಿ, ‘ನರಗುಂದ ಮತಕ್ಷೇತ್ರದ ಜನತೆಯ ಸಲುವಾಗಿ ಕುಷ್ಟಗಿಯಿಂದ ನರಗುಂದ– ಯಲ್ಲಮ್ಮನ ಗುಡ್ಡದ ಮಾರ್ಗವಾಗಿ ಗೋಕಾಕದವರೆಗೆ ರೈಲು ಮಾರ್ಗ ಪ್ರಾರಂಭಿಸಲು ಕೇಂದ್ರ ಸರ್ಕಾರದಿಂದ ಅನುಮತಿ ಪಡೆಯಬೇಕು’ ಎಂದು ಒತ್ತಾಯಿಸಿದರು.
ಮನವಿಗೆ ಸ್ಪಂದಿಸಿದ ಸಚಿವ ಜೋಶಿ, ಇದಕ್ಕೆ ಸಂಬಂಧಿಸಿ ಅಧಿಕಾರಿಗಳೊಂದಿಗೆ ಚರ್ಚೆ ಮಾಡುವುದಾಗಿ ಭರವಸೆ ನೀಡಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.