ಶಿರಹಟ್ಟಿ: ತಾಲ್ಲೂಕಿನ ಮಜ್ಜೂರು ಕೆರೆಗೆ ತಹಶೀಲ್ದಾರ ಕೆ.ರಾಘವೇಂದ್ರ ರಾವ್ ಗುರುವಾರ ಭೇಟಿ ನೀಡಿ ಪರಿಶೀಲನೆ ಮಾಡಿದರು.
ಈ ಸಂದರ್ಭದಲ್ಲಿ ಮಾತನಾಡಿದ ಅವರು, ಮಜ್ಜೂರು ಕೆರೆಗೆ ವಿಸ್ತಾರವಾದ ಭೂ ಪ್ರದೇಶದವಿದ್ದು, ದುರಸ್ತಿಗೊಳಿಸಿದರೆ ಈ ಭಾಗದ ರೈತರ ಅತ್ಯಂತ ಅನುಕೂಲವಾಗಲಿದೆ ಎಂದರು.
ಕೆರೆಯ ಸುತ್ತಮುತ್ತಲಿನ ಪ್ರದೇಶ ಹಾಗೂ ಕೆರೆಗೆ ಹೋಗುವ ದಾರಿಯನ್ನು ದುರಸ್ತಿಗೊಳಿಸಲು ಸಣ್ಣ ನೀರಾವರಿ ಇಲಾಖೆಯ ಅಧಿಕಾರಿಗಳಿಗೆ ಸರಿಪಡಿಸಲು ಸೂಚಿಸಿದರು. ಜೊತೆಗೆ ಕೆರೆಗೆ ಹೊಂದಿಕೊಂಡಿರುವ ರೈತರ ಜಮೀನುಗಳಿಗೆ ಭೇಟಿ ನೀಡಿ ಸದರಿ ಜಮೀನುಗಳಿಗೆ ಹೋಗುವ ರಸ್ತೆಯನ್ನು ಸಹ ಪರಿಶೀಲಿಸಿ ದುರಸ್ತಿಗೆ ಅರಣ್ಯ ಇಲಾಖೆ ಅಧಿಕಾರಿಗಳು ಹಾಗೂ ಸಂಬಂದಪಟ್ಟ ಅಧಿಕಾರಿಗಳಿಗೆ ಸೂಚಿಸಿದರು.
ಈ ಸಂದರ್ಭದಲ್ಲಿ ಕಂದಾಯ ನಿರೀಕ್ಷಕ ಬಸವರಾಜ ಕಾತರಾಳ, ಗ್ರಾಮ ಆಡಳಿತ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.