
ಪ್ರಜಾವಾಣಿ ವಾರ್ತೆ
ಗದಗ: ಲಕ್ಕುಂಡಿ ಉತ್ಖನನದ ನಿರ್ದೇಶಕರಾಗಿದ್ದ ಡಾ.ಟಿ.ಎಂ.ಕೇಶವ (77) ಅವರು ಬೆಂಗಳೂರಿನ ಆಸ್ಪತ್ರೆಯಲ್ಲಿ ಶುಕ್ರವಾರ ನಿಧನರಾದರು ಎಂದು ಲಕ್ಕುಂಡಿ ಪಾರಂಪರಿಕ ಪ್ರದೇಶ ಅಭಿವೃದ್ಧಿ ಪ್ರಾಧಿಕಾರದ ಆಯುಕ್ತ ಶರಣು ಗೋಗೇರಿ ತಿಳಿಸಿದ್ದಾರೆ.
ಕೇಂದ್ರ ಪುರಾತತ್ವ ಇಲಾಖೆಯಲ್ಲಿ ಉನ್ನತ ಅಧಿಕಾರಿಯಾಗಿ ಸೇವೆ ಸಲ್ಲಿಸಿ ನಿವೃತ್ತರಾಗಿದ್ದ ಡಾ.ಟಿ.ಎಂ. ಕೇಶವ ಅವರು ಪುರಾತತ್ವ ಕ್ಷೇತ್ರದಲ್ಲಿ ಅಪಾರ ಅನುಭವ ಮತ್ತು ಜ್ಞಾನ ಹೊಂದಿದ್ದರು. ಅವರ ಮಾರ್ಗದರ್ಶನದಿಂದ ಲಕ್ಕುಂಡಿ ಉತ್ಖನನ ಕಾರ್ಯಕ್ಕೆ ವೈಜ್ಞಾನಿಕ ದೃಷ್ಟಿಕೋನ ಮತ್ತು ಶಿಸ್ತು ದೊರಕಿತ್ತು ಎಂದು ಅವರು ತಿಳಿಸಿದ್ದಾರೆ.
ಶನಿವಾರ(ಜ.31) ಲಕ್ಕುಂಡಿಯ ಉತ್ಖನನ ಸ್ಥಳದಲ್ಲಿ ಕೇಶವ ಅವರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು’ ಎಂದು ಮಾಹಿತಿ ನೀಡಿದ್ದಾರೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.