ADVERTISEMENT

ಲಕ್ಷ್ಮೇಶ್ವರ: ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಆಗ್ರಹ

​ಪ್ರಜಾವಾಣಿ ವಾರ್ತೆ
Published 16 ಜೂನ್ 2025, 16:05 IST
Last Updated 16 ಜೂನ್ 2025, 16:05 IST
ಲಕ್ಷ್ಮೇಶ್ವರದ ಬಜಾರ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗ್ರಹಿಸಿದರು
ಲಕ್ಷ್ಮೇಶ್ವರದ ಬಜಾರ ರಸ್ತೆ ಕಾಮಗಾರಿಯನ್ನು ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗ್ರಹಿಸಿದರು   

ಲಕ್ಷ್ಮೇಶ್ವರ: ಬಜಾರ ರಸ್ತೆ ಕಾಮಗಾರಿಯನ್ನು ಆದಷ್ಟು ಬೇಗನೇ ಪೂರ್ಣಗೊಳಿಸಬೇಕು ಎಂದು ಒತ್ತಾಯಿಸಿ ಕರ್ನಾಟಕ ರಾಜ್ಯ ನಿವೃತ್ತ ಸರ್ಕಾರಿ ನೌಕರರ ಹಾಗೂ ಹಿರಿಯ ನಾಗರಿಕರ ಕ್ಷೇಮಾಭಿವೃದ್ಧಿ ಸಂಘದ ಸದಸ್ಯರು ಆಗ್ರಹಿಸಿದರು.

ಸಂಘದ ಸದಸ್ಯ ಚಂಬಣ್ಣ ಬಾಳಿಕಾಯಿ ಮಾತನಾಡಿ, ‘ಕಾಮಗಾರಿ ಆರಂಭಗೊಂಡು ಎರಡು ತಿಂಗಳಾದರೂ ಕೇವಲ 200 ಮೀಟರ್ ರಸ್ತೆ ಪೂರ್ಣಗೊಳಿಸಲು ಗುತ್ತಿಗೆದಾರರಿಗೆ ಸಾಧ್ಯವಾಗುತ್ತಿಲ್ಲ. ಇದರಿಂದ ಸಾರ್ವಜನಿಕರಿಗೆ ತೊಂದರೆಯಾಗುತ್ತಿದೆ. ಅದರಲ್ಲಿಯೂ ಹಿರಿಯ ನಾಗರಿಕರು ಇಲ್ಲಿ ನಡೆದಾಡಲು ಆಗುತ್ತಿಲ್ಲ. ತಕ್ಷಣ ರಸ್ತೆ ಕಾಮಗಾರಿ ಪೂರ್ಣಗೊಳಿಸಲು ಕ್ರಮಕೈಗೊಳ್ಳಬೇಕು. ಇಲ್ಲವಾದರೇ ಹಿರಿಯ ನಾಗರಿಕರ ಸಂಘದ ವತಿಯಿಂದ ಪ್ರತಿಭಟನೆ ನಡೆಸಲಾಗುವುದು’ ಎಂದು ಎಚ್ಚರಿಸಿದರು.

ಯುವ ಮುಖಂಡ ನಾಗರಾಜ ಚಿಂಚಲಿ ಮಾತನಾಡಿದರು. ಮಂಜುನಾಥ ಮಾಗಡಿ, ಚನ್ನಪ್ಪ ಕೋಲಕಾರ, ಕುಬೇರಪ್ಪ ಮಹಾಂತಶೆಟ್ಟರ, ಎಸ್.ಪಿ. ಪಾಟೀಲ, ಸಿ.ಎಸ್. ಕೋಟಿಮಠ, ಎಸ್.ಜಿ. ತಾಳಿಕೋಟಿಮಠ, ದ್ಯಾಮನಗೌಡ ಪಾಟೀಲ, ನೀಲಪ್ಪ ಕರ್ಜಕಣ್ಣವರ, ನಾಗರಾಜ ಚಿಂಚಲಿ, ಮಂಜುನಾಥ ಮಾಗಡಿ, ಚಂದ್ರಶೇಖರ ಹೂಗಾರ, ಶಕುಂತಲಾ ಅಳಗವಾಡಿ, ಈರಣ್ಣ ಮಡಿವಾಳರ ಇದ್ದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.