
ಲಕ್ಷ್ಮೇಶ್ವರ: ಮೆಕ್ಕೆಜೋಳದ ಬೆಲೆ ಕುಸಿತವಾಗಿದ್ದು, ರೈತರ ಮೊರೆಗೆ ಸ್ಪಂದಿಸದ ಸರ್ಕಾರದ ವಿರುದ್ದ ಸೋಮವಾರ ತಾಲ್ಲೂಕಿನ ಸಮಗ್ರ ರೈತ ಹೋರಾಟ ಸಮಿತಿ ಹಾಗೂ ಕೃಷಿಕ ಸಮಾಜ ಸಂಘಟನೆ ವತಿಯಿಂದ ಪ್ರತಿಭಟನೆ ನಡೆಸಿ ತಹಶೀಲ್ದಾರ್ ಕೆ. ರಾಘವೇಂದ್ರ ಅವರಿಗೆ ಮನವಿ ಸಲ್ಲಿಸಿದರು.
ಉತ್ತರ ಕರ್ನಾಟಕ ಮಹಾಸಭಾದ ರಾಜ್ಯ ಘಟಕದ ಅಧ್ಯಕ್ಷ ರವಿಕಾಂತ ಅಂಗಡಿ, ರೈತ ಮುಖಂಡ ಮಂಜುನಾಥ ಮಾಗಡಿ ಮಾತನಾಡಿ, ‘ಮೆಕ್ಕೆಜೋಳ ತಾಲ್ಲೂಕಿನ ಪ್ರಮುಖ ಬೆಳೆಯಾಗಿದ್ದು, ಬೆಲೆ ಕಡಿಮೆಯಾದ ಕಾರಣ ರೈತರಿಗೆ ನಷ್ಟವಾಗುತ್ತಿದೆ. ಮಧ್ಯವರ್ತಿಗಳು ಹಾಗೂ ದಲ್ಲಾಳಿಗಳು ಬೆಲೆ ಪಾತಾಳಕ್ಕೆ ಕುಸಿಯುವಂತೆ ಮಾಡುತ್ತಿದ್ದಾರೆ’ ಎಂದು ಆರೋಪಿಸಿದರು.
ಅತಿವೃಷ್ಟಿಯಿಂದ ಬೆಳೆ ಹಾಳಾಗಿದ್ದು, ರೈತರು ಪ್ರತಿ ಎಕರೆಗೆ ₹25 ರಿಂದ ₹30 ಸಾವಿರ ಖರ್ಚು ಮಾಡಿದ್ದಾರೆ. ಮರುಕಟ್ಟೆಯಲ್ಲಿ ಮೆಕ್ಕೆಜೋಳ ಬೆಲೆ ಪ್ರತಿ ಕ್ವಿಂಟಲ್‌ಗೆ ₹ 18 ಸಾವಿರ ಇದ್ದು, ಇದರಿಂದ ರೈತರಿಗೆ ನಷ್ಟವಾಗುತ್ತಿದೆ. ಕಾರಣ ಮೆಕ್ಕೆಜೋಳ ಬೆಂಬಲ ಬೆಲೆ ಖರೀದಿ ಕೇಂದ್ರ ಆರಂಭಿಸಿ ಕನಿಷ್ಠ ₹2,400 ದರ ಘೋಷಣೆ ಮಾಡಬೇಕು’ ಎಂದು
ಆಗ್ರಹಿಸಿದರು.
ಕೃಷಿಕ ಸಮಾಜದ ತಾಲ್ಲೂಕು ಘಟಕ ಅಧ್ಯಕ್ಷ ಚೆನ್ನಪ್ಪ ಷಣ್ಮುಖಿ, ಟಾಕಪ್ಪ ಸಾತಪುತೆ, ಸುರೇಶ ರಾಚನಾಯ್ಕರ, ಎಸ್.ಪಿ. ಪಾಟೀಲ, ನೀಲಪ್ಪ ಕರ್ಜೆಕಣ್ಣವರ, ದೇವಪ್ಪ ಲಮಾಣಿ, ಎಂ.ಎಸ್. ದೊಡ್ಡಗೌಡರ, ಸೋಮಣ್ಣ ಡಾಣಗಲ್ಲ, ಹೊನ್ನಪ್ಪ ವಡ್ಡರ, ಮಂಜುನಾಥ ಬಟ್ಟೂರ, ನಾಗರಾಜ ಚಿಂಚಲಿ, ಬಸವರಾಜ ಜಾಲಗಾರ, ಮಹಾದೇವಗೌಡ ನರಸಮ್ಮನವರ, ಇಸ್ಮಾಯಿಲ್ ಅಡೂರ
ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.