
ಲಕ್ಷ್ಮೇಶ್ವರ: ಕನ್ನಡ ಸಾಹಿತ್ಯ ಪರಿಷತ್ತಿನ ವತಿಯಿಂದ ತಾಲ್ಲೂಕಿನ ಗೋವನಾಳ ಗ್ರಾಮದ ಸರ್ಕಾರಿ ಹಿರಿಯ ಶಾಲೆಯಲ್ಲಿ ಸೋಮವಾರ ಹಮ್ಮಿಕೊಂಡ ಮಾಸದ ಮಾತು ಕಾರ್ಯಕ್ರಮ ಸರಣಿಯ 26ನೇ ಸಂಚಿಕೆಯಲ್ಲಿ ರಾಷ್ಟ್ರಕವಿ ಕುವೆಂಪು ಜಯಂತಿ ಹಾಗೂ ವಿಶ್ವಮಾನವ ದಿನಾಚರಣೆ ಕಾರ್ಯಕ್ರಮ ಜರುಗಿತು.
ಅಗಡಿ ಎಂಜಿನಿಯರಿಂಗ್ ಕಾಲೇಜಿನ ಉಪನ್ಯಾಸಕ ಷಣ್ಮುಖ ಗಡ್ಡೆಣ್ಣನವರ ಮಾತನಾಡಿ, ‘ಕನ್ನಡ ನಾಡು ಎಂದೂ ಮರೆಯದ ಸಾಹಿತ್ಯವನ್ನು ಕುವೆಂಪು ಕೊಡುಗೆಯಾಗಿ ನೀಡಿದ್ದಾರೆ. ಅವರ ಶ್ರೀರಾಮಾಯಣ ದರ್ಶನಂ ಕಾವ್ಯ ಅದ್ಭುತ ರಚನೆ ಆಗಿದೆ’ ಎಂದು ಹೇಳಿದರು.
ಬಿ.ಎನ್. ರೊಟ್ಟಿಗವಾಡ ಮಾತನಾಡಿ, ‘ಸಾಹಿತ್ಯ ಪರಿಷತ್ತಿನ ಚಟುವಟಿಕೆಗಳು ಪಟ್ಟಣ ಪ್ರದೇಶಕ್ಕೆ ಸೀಮಿತವಾಗದೆ ಗ್ರಾಮೀಣ ಭಾಗದಲ್ಲಿ ನಿರಂತರವಾಗಿ ಜರುಗುತ್ತಿರುವುದು ಸ್ವಾಗತಾರ್ಹ ಎಂದು ಹೇಳಿದರು.
ಕಸಾಪ ಶಾಲಾ ಘಟಕ ಉದ್ಘಾಟಿಸಿದ ಜಗದೀಶಯ್ಯ ಗಡ್ಡದೇವರಮಠ ಮಾತನಾಡಿ, ‘ಸಾಹಿತ್ತಿಕ ಜಾಗೃತಿ ಕಾರ್ಯಕ್ರಮಗಳು ಸಭೆ ಸಮಾರಂಭಗಳ ಜೊತೆಗೆ ಮನೆ ಮನಗಳಲ್ಲಿ ಮೂಡಬೇಕು. ಕನ್ನಡದ ಬಗ್ಗೆ ಅಭಿಮಾನ ಮತ್ತಷ್ಟು ಜಾಗೃತವಾಗಬೇಕು’ ಎಂದರು.
ಮುಖ್ಯ ಶಿಕ್ಷಕ ಎಸ್.ಪಿ. ಮುಳುಗುಂದ ‘ಶಾಲಾ ಕಾಲೇಜುಗಳಲ್ಲಿ ಸಾಹಿತ್ಯ ಪರಿಷತ್ತಿನ ಘಟಕಗಳನ್ನು ಸ್ಥಾಪಿಸುವುದರ ಮೂಲಕ ಮೂಲಕ ಶಾಲಾ ಹಂತದಲ್ಲಿಯೇ ಮಕ್ಕಳಲ್ಲಿ ಕನ್ನಡದ ಬಗ್ಗೆ ಅಭಿಮಾನ ಮೂಡಿಸುವ ಮಾದರಿ ಕಾರ್ಯವನ್ನು ಲಕ್ಷ್ಮೇಶ್ವರ ತಾಲೂಕ ಕಸಾಪ ಘಟಕ ಮಾಡುತ್ತಿರುವುದು ಶ್ಲಾಘನೀಯ’ ಎಂದು ಹೇಳಿದರು.
ಗ್ರಾಮ ಪಂಚಾಯಿತಿ ಉಪಾಧ್ಯಕ್ಷೆ ನಿರ್ಮಲಾ ತಳವಾರ ಶಾಲಾ ಘಟಕದ ವಿದ್ಯಾರ್ಥಿಗಳಿಗೆ ಪ್ರಮಾಣ ಪತ್ರ ವಿತರಿಸಿದರು. ಅಧ್ಯಕ್ಷತೆ ವಹಿಸಿದ್ದ ಲಕ್ಷ್ಮೇಶ್ವರ ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಈಶ್ವರ ಮೆಡ್ಲೇರಿ, ಬಸವರಾಜ ಯತ್ತಿನಹಳ್ಳಿ, ಎಸ್.ಪಿ. ಕಟ್ಟೆಣ್ಣವರ, ಎಸ್.ಬಿ. ಅಣ್ಣಿಗೇರಿ, ಈರಣ್ಣ ಗಾಣಿಗೇರ, ನಾಗರಾಜ ಮಜ್ಜಿಗುಡ್ಡ ಮಾತನಾಡಿದರು.
ಶಾಲೆಯ ಮಕ್ಕಳು ಕುವೆಂಪು ವಿರಚಿತ ನಾಡಗೀತೆಗಳನ್ನು ಪ್ರಸ್ತುತಪಡಿಸಿದರು. ಶಿಕ್ಷಕಿ ಶೋಭಾ ಮಲ್ಲಿಗವಾಡ ಕಾರ್ಯಕ್ರಮ ನಿರೂಪಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.