ADVERTISEMENT

ಲಕ್ಷ್ಮೇಶ್ವರ | ಪರೀಕ್ಷೆ ಫಲಿತಾಂಶ ಸುಧಾರಣೆಗೆ ಕ್ರಮ: 2 ಗಂಟೆ ಮೊಬೈಲ್ ಬಂದ್

​ಪ್ರಜಾವಾಣಿ ವಾರ್ತೆ
Published 5 ಫೆಬ್ರುವರಿ 2026, 2:36 IST
Last Updated 5 ಫೆಬ್ರುವರಿ 2026, 2:36 IST
ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಕ್ಕಳ ಓದಿನ ಸಲುವಾಗಿ ಸಂಜೆ 7ರಿಂದ ರಾತ್ರಿ 9ರವರೆಗೆ ಮೊಬೈಲ್ ಫೋನ್ ಹಾಗೂ ಟಿ.ವಿ ಬಂದ್ ಮಾಡಬೇಕು ಎಂದು ಡಂಗುರ ಸಾರಿದರು
ಲಕ್ಷ್ಮೇಶ್ವರ ತಾಲ್ಲೂಕಿನ ದೊಡ್ಡೂರು ಗ್ರಾಮದಲ್ಲಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಮಕ್ಕಳ ಓದಿನ ಸಲುವಾಗಿ ಸಂಜೆ 7ರಿಂದ ರಾತ್ರಿ 9ರವರೆಗೆ ಮೊಬೈಲ್ ಫೋನ್ ಹಾಗೂ ಟಿ.ವಿ ಬಂದ್ ಮಾಡಬೇಕು ಎಂದು ಡಂಗುರ ಸಾರಿದರು   

ಲಕ್ಷ್ಮೇಶ್ವರ: ತಾಲ್ಲೂಕಿನ ಎಲ್ಲ ಹದಿನಾಲ್ಕು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಳ್ಳಿಗಳಲ್ಲಿ ಪ್ರತಿದಿನ ಸಂಜೆ 7ರಿಂದ ರಾತ್ರಿ 9ರವರೆಗೆ ಮೊಬೈಲ್ ಫೋನ್ ಹಾಗೂ ಟಿವಿಗಳನ್ನು ಆಫ್ ಮಾಡಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಪಿಡಿಒಗಳಿಗೆ ಆದೇಶ ಹೊರಡಿಸಿದ್ದಾರೆ.

ಮಕ್ಕಳ ಓದಿಗೆ ಅನುಕೂಲವಾಗಲು ಹಾಗೂ ಎಸ್‌ಎಸ್‌ಎಲ್‌ಸಿ ಮಕ್ಕಳ ಫಲಿತಾಂಶ ಸುಧಾರಣೆಯ ಹಿತದೃಷ್ಟಿಯಿಂದ ಗ್ರಾಮಸ್ಥರು ಸಂಜೆ 7ರಿಂದ ರಾತ್ರಿ 9ರವರೆಗೆ ತಮ್ಮ ಮೊಬೈಲ್ ಬಳಕೆ ಹಾಗೂ ಟಿವಿಗಳನ್ನು ಬಂದ್ ಮಾಡುವಂತೆ ಡಂಗುರ ಸಾರಿಸಲು ಅವರು ಪಿಡಿಒಗಳಿಗೆ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಶಿಕ್ಷಣಾಧಿಕಾರಿಗಳ ಸೂಚನೆ ಮೇರೆಗೆ ಈ ಆದೇಶವನ್ನು ಹೊರಡಿಸಲಾಗಿದೆ ಎಂದು ಅವರು ಪ್ರಕಟಣೆಯಲ್ಲಿ ತಿಳಿಸಿದರು. ಇಒ ಅವರ ಆದೇಶದ ಹಿನ್ನೆಲೆಯಲ್ಲಿ ಬುಧವಾರ ತಾಲ್ಲೂಕಿನ ದೊಡ್ಡೂರು, ರಾಮಗೇರಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಗ್ರಾಮಗಳಲ್ಲಿ ಡಂಗುರ ಸಾರಿದರು.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.