ADVERTISEMENT

ಲಕ್ಷ್ಮೇಶ್ವರ | ರಸ್ತೆ ಗುಂಡಿ: ಸಂಚಾರಕ್ಕೆ ಅಡ್ಡಿ

​ಪ್ರಜಾವಾಣಿ ವಾರ್ತೆ
Published 27 ಅಕ್ಟೋಬರ್ 2025, 2:55 IST
Last Updated 27 ಅಕ್ಟೋಬರ್ 2025, 2:55 IST
ಲಕ್ಷ್ಮೇಶ್ವರ ತಾಲ್ಲೂಕಿನ ಮುನಿಯನ ತಾಂಡಾ-ಉಂಡೇನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಹಾಳಾಗಿರುವುದು
ಲಕ್ಷ್ಮೇಶ್ವರ ತಾಲ್ಲೂಕಿನ ಮುನಿಯನ ತಾಂಡಾ-ಉಂಡೇನಹಳ್ಳಿ ಸಂಪರ್ಕ ಕಲ್ಪಿಸುವ ರಸ್ತೆ ಗುಂಡಿ ಬಿದ್ದು ಹಾಳಾಗಿರುವುದು   

ಲಕ್ಷ್ಮೇಶ್ವರ: ತಾಲ್ಲೂಕಿನ ಮುನಿಯನ ತಾಂಡಾದಿಂದ ಉಂಡೇನಹಳ್ಳಿ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಹಾಳಾಗಿದ್ದು, ವಾಹನ ಸವಾರರು ಮತ್ತು ರೈತರು ಸಂಚರಿಸಲು ಹರಸಾಹಸ ಪಡುತ್ತಿದ್ದಾರೆ.

ಮುನಿಯನ ತಾಂಡಾದಿಂದ ಉಂಡೇನಹಳ್ಳಿ, ಸೂರಣಗಿ, ಸೂವರ್ಣಗಿರಿ, ಯಲ್ಲಾಪುರ ಗ್ರಾಮಕ್ಕೆ ಸಂಪರ್ಕ ಕಲ್ಲಿಸುವ ರಸ್ತೆ ಮಧ್ಯದಲ್ಲಿ ದೊಡ್ಡ ಗುಂಡಿಗಳು ಬಿದ್ದಿವೆ. ಮಳೆಗಾಲದಲ್ಲಿ ರಸ್ತೆ ಜಲಾವೃತವಾಗುತ್ತದೆ.

ಮುನಿಯನ ತಾಂಡಾ ಮತ್ತು ಉಂಡೇನಹಳ್ಳಿ ಗ್ರಾಮದ ರೈತರು ಈ ರಸ್ತೆ ಮೂಲಕ ತಮ್ಮ ಹೊಲಗಳಿಗೆ ತೆರಳಲು ನಿತ್ಯ ತೊಂದರೆ ಅನುಭವಿಸುತ್ತಿದ್ದಾರೆ. ರಸ್ತೆ ದುರಸ್ತಿ ಮಾಡಿಸುವಂತೆ ಗ್ರಾಮಸ್ಥರ ಮನವಿಗೆ ಸ್ಪಂಧಿಸಿದ ಅಧಿಕಾರಿಗಳು ಪರಿಶೀಲಿಸಿ ನಡೆಸಿದ್ದು, ಯಾವುದೇ ಪ್ರಯೋಜನವಾಗಿಲ್ಲ ಎಂದು ರೈತ ಮುಖಂಡ ಲಕ್ಷ್ಮಣ ಲಮಾಣಿ ಆಕ್ರೋಶ ವ್ಯಕ್ತಪಡಿಸಿದರು.

ADVERTISEMENT

ರಸ್ತೆ ದುರಸ್ತಿಗೆ ಗ್ರಾಮ ಪಂಚಾಯಿತಿಯಿಂದ ಕ್ರಿಯಾಯೋಜನೆ ಸಿದ್ಧಪಡಿಸಿ ತಾಲ್ಲೂಕು ಪಂಚಾಯಿತಿಗೆ ಸಲ್ಲಿಸಲಾಗಿದೆ. ಅಧಿಕಾರಿಗಳೂ ಸಹ ಭೇಟಿ ನೀಡಿ ರಸ್ತೆ ಪರಿಶೀಲನೆ ನಡೆಸಿದ್ದು, ಇದುವರೆಗೂ ದುರಸ್ತಿ ಕಾಮಗಾರಿ ಆರಂಭವಾಗಿಲ್ಲ’ ಎಂದು ಗ್ರಾಮ ಪಂಚಾಯಿತಿ ಸದಸ್ಯೆ ಇಂದ್ರವ್ವ ಲಕ್ಷ್ಮಣ ಲಮಾಣಿ ತಿಳಿಸಿದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.