
ಲಕ್ಷ್ಮೇಶ್ವರ: ಪಟ್ಟಣಕ್ಕೆ ಡಿ.13ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸ್ಕೂಲ್ ಚಂದನದಲ್ಲಿ ನಡೆಯುವ ವಿಜ್ಞಾನ ವಿಸೃತ ದಶಮಾನೋತ್ಸವ ಕಾರ್ಯಕ್ರಮಕ್ಕೆ ಆಗಮಿಸುವ ಅಂಗವಾಗಿ ಕಾರ್ಯಕ್ರಮದ ಸಿದ್ಧತೆಗಳು ಭರದಿಂದ ಸಾಗಿವೆ.
ಪುರಸಭೆ ಉಮಾ ವಿದ್ಯಾಲಯ ಪ್ರೌಢ ಶಾಲೆಯ ಮೈದಾನದಲ್ಲಿ ಹೆಲಿಪ್ಯಾಡ್ ನಿರ್ಮಿಸಲಾಗಿದ್ದು, ಸ್ಥಳಕ್ಕೆ ಜಿಲ್ಲಾಧಿಕಾರಿ ಸಿ.ಎನ್. ಶ್ರೀಧರ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಈ ವೇಳೆ ಚಂದನ ಸಂಸ್ಥೆಯ ಸಂಸ್ಥಾಪಕ ಟಿ.ಈಶ್ವರ ಅವರು ಜಿಲ್ಲಾಧಿಕಾರಿಗಳಿಗೆ ಕಾರ್ಯಕ್ರಮದ ರೂಪರೇಷೆ ವಿವರಿಸಿದರು. ಪೋಲಿಸ್ ವರಿಷ್ಠಾಧಿಕಾರಿ ರೋಹನ್ ಜಗದೀಶ್, ಡಿವೈಎಸ್‍ಪಿ ಮುರ್ತೂಜಾ ಖಾದ್ರಿ, ತಹಶೀಲ್ದಾರ್ ಎಂ.ಧನಂಜಯ, ಪುರಸಭೆ ಮುಖ್ಯಾಧಿಕಾರಿ ಮಹಾಂತೇಶ ಬೀಳಗಿ, ಕ್ಷೇತ್ರ ಶಿಕ್ಷಣಾಧಿಕಾರಿ ಎಚ್.ಎನ್. ನಾಯಕ, ಸಿಪಿಐ ಬಿ.ವಿ. ನ್ಯಾಮಗೌಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.