
ಲಕ್ಷ್ಮೇಶ್ವರ: ‘ದೇಶದ ಸಂಸ್ಕೃತಿ, ಕಲೆ, ಸಾಹಿತ್ಯ ಉಳಿಸಿ, ಬೆಳೆಸುವಲ್ಲಿ ಶಾಲಾ ವಾರ್ಷಿಕೋತ್ಸವ ಪ್ರಮುಖ ಪಾತ್ರ ವಹಿಸುತ್ತವೆ’ ಎಂದು ಕನ್ನಡ ಸಾಹಿತ್ಯ ಪರಿಷತ್ ತಾಲ್ಲೂಕು ಘಟಕದ ಅಧ್ಯಕ್ಷ ಈಶ್ವರ ಮೆಡ್ಲೇರಿ ಹೇಳಿದರು.
ಪಟ್ಟಣದ ಫಿನಿಕ್ಸ್ ಇಂಟರ್‌ನ್ಯಾಷನಲ್ ಶಾಲೆಯಲ್ಲಿ ಶನಿವಾರ ನಡೆದ 2025-26ನೇ ಸಾಲಿನ ಮಕ್ಕಳ ಪಾಲಕರ– ಶಿಕ್ಷಕರ ವಾರ್ಷಿಕೋತ್ಸವ, ಸರಸ್ವತಿ ಪೂಜಾ ಸಮಾರಂಭ ಹಾಗೂ ವಸ್ತು ಪ್ರದರ್ಶನ ಉದ್ಘಾಟಿಸಿ ಮಾತನಾಡಿದರು.
ಉಪನ್ಯಾಸಕ ಭೀಮಸೇನ ಉಗ್ರರ ಮಾತನಾಡಿ, ‘ಶಾಲಾ ವಾರ್ಷಿಕೋತ್ಸವ ಕಾರ್ಯಕ್ರಮಗಳಲ್ಲಿ ವಿದ್ಯಾರ್ಥಿಗಳು ಪ್ರತಿಭೆ ಪ್ರದರ್ಶಿಸಿದರೆ ಕಲೆ, ಸಂಸ್ಕೃತಿ, ಪರಂಪರೆಯ ಅರಿವು ಮೂಡುತ್ತದೆ’ ಎಂದರು.
‘ಮಕ್ಕಳಿಗೆ ಪಠ್ಯಕ್ರಮ ಎಷ್ಟು ಮುಖ್ಯವೋ, ಪಠ್ಯೇತರ ಚಟುವಟಿಕೆಯೂ ಅಷ್ಟೇ ಮುಖ್ಯ. ಶಿಕ್ಷಣದೊಂದಿಗೆ ಕ್ರೀಡೆ, ಸಾಂಸ್ಕೃತಿಕ ಚಟುವಟಿಕೆಯಲ್ಲಿ ಪಾಲ್ಗೊಳ್ಳಬೇಕು. ಉತ್ತಮ ಶಿಕ್ಷಣದೊಂದಿಗೆ ಉತ್ತಮ ಆರೋಗ್ಯ ಹೊಂದಬೇಕು. ಮಾನವೀಯ ಮೌಲ್ಯಗಳನ್ನು ರೂಢಿಸಿಕೊಳ್ಳುವಂತೆ ಪಾಲಕರು ಮತ್ತು ಶಿಕ್ಷಕರು ಮಕ್ಕಳನ್ನು ಪ್ರೇರೇಪಿಸಬೇಕು ಎಂದು ತಿಳಿಸಿದರು.
ಎಸ್.ಬಿ. ಕೊಣ್ಣೂರ ಅಧ್ಯಕ್ಷತೆ ವಹಿಸಿದ್ದರು. ಸಭಾ ಕಾರ್ಯಕ್ರಮದ ಬಳಿಕ ಸಾಂಸ್ಕೃತಿಕ ಕಾರ್ಯಕ್ರಮಗಳು ನಡೆದವು.
ಶಾಲೆ ಆಡಳಿತ ಮಂಡಳಿ ಅಧ್ಯಕ್ಷ ಮಲ್ಲಿಕಾರ್ಜುನ ಕೋಟಗಿ, ಕಾರ್ಯದರ್ಶಿ ಶಿವಯೋಗಿ ಗಾಂಜಿ, ಚಂದ್ರಶೇಖರ ಕಗ್ಗಲಗೌಡ್ರ, ವಿಜಯಕುಮಾರ ಹತ್ತಿಕಾಳ, ರಾಜಶೇಖರ ಹಾಲೇವಡಿಮಠ, ಕಿರಣ ನಾಲವಾಡ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.