ADVERTISEMENT

ಲಕ್ಷ್ಮೇಶ್ವರ | ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಆತ್ಮಹತ್ಯೆ

​ಪ್ರಜಾವಾಣಿ ವಾರ್ತೆ
Published 10 ಜನವರಿ 2025, 15:38 IST
Last Updated 10 ಜನವರಿ 2025, 15:38 IST
ಸುನೀಲ ಚವ್ಹಾಣ
ಸುನೀಲ ಚವ್ಹಾಣ   

ಲಕ್ಷ್ಮೇಶ್ವರ : ಶಿರಹಟ್ಟಿ ಶಾಸಕ ಡಾ.ಚಂದ್ರು ಲಮಾಣಿ ಅವರ ಕಾರು ಚಾಲಕ ಸುನೀಲ್ ಚವ್ಹಾಣ (25) ಶುಕ್ರವಾರ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. 

‘ಲಕ್ಷ್ಮೇಶ್ವರದ ಮಲ್ಲಾಡದ ಕಾಲೊನಿಯಲ್ಲಿ ಇರುವ ಶಾಸಕ ಡಾ. ಚಂದ್ರು ಲಮಾಣಿ ಅವರಿಗೆ ಸೇರಿದ, ಅತಿಥಿಗಳಿಗೆ ಮೀಸಲಿಟ್ಟ ಮನೆಯಲ್ಲಿ ಸುನೀಲ್ ನೇಣು ಹಾಕಿಕೊಂಡಿದ್ದಾರೆ. ಮೂರು ವರ್ಷಗಳಿಂದ ಶಾಸಕರಿಗೆ ಚಾಲಕರಾಗಿದ್ದ ಅವರ ಆತ್ಮಹತ್ಯೆ ನಿಖರ ಕಾರಣ ತಿಳಿದುಬಂದಿಲ್ಲ’ ಎಂದು ಪೊಲೀಸರು ತಿಳಿಸಿದ್ದಾರೆ.

ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ADVERTISEMENT

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.