
ಪ್ರಜಾವಾಣಿ ವಾರ್ತೆ
ಲಕ್ಷ್ಮೇಶ್ವರ: ತಾಲ್ಲೂಕಿನ ದೊಡ್ಡೂರು ಗ್ರಾಮದ ಬಸ್ ನಿಲ್ದಾಣದ ಹತ್ತಿರ ಸೋಮವಾರ ಬೈಕ್ ಮತ್ತು ಲಾರಿ ಮಧ್ಯೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿದ್ದಾರೆ.
ಲಕ್ಷ್ಮೇಶ್ವರದ ನಿವಾಸಿ ಕೊಟ್ರೇಶ ದ್ಯಾವಪ್ಪ ಗಡ್ಡಿಗೌಡ್ರ (32) ಮೃತರು.
ಕೊಟ್ರೇಶ ಅವರು ಲಕ್ಷ್ಮೇಶ್ವರದಿಂದ ದೊಡ್ಡೂರು ಮಾರ್ಗವಾಗಿ ಯಲ್ಲಾಪುರ ಕಡೆ ಬೈಕ್‌ನಲ್ಲಿ ತೆರಳುವಾಗ ಈ ದುರ್ಘಟನೆ ನಡೆದಿದೆ ಎಂದು ಗೊತ್ತಾಗಿದೆ. ಈ ಕುರಿತು ಲಕ್ಷ್ಮೇಶ್ವರದ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.