ಡಿ.ಬಿ. ಪಾಟೀಲ
ಗದಗ: ಆದಾಯ ಮೀರಿ ಆಸ್ತಿ ಗಳಿಕೆ ಆರೋಪದ ಹಿನ್ನೆಲೆಯಲ್ಲಿ ಇಲ್ಲಿನ ಗದಗ ಶಹರ ಪೊಲೀಸ್ ಠಾಣೆ ಸಿಪಿಐ ಡಿ.ಬಿ. ಪಾಟೀಲ ಮನೆ ಸೇರಿ ಹಲವೆಡೆ ಲೋಕಾಯುಕ್ತ ಪೊಲೀಸರು ದಾಳಿ ನಡೆಸಿದ್ದಾರೆ.
ಗದಗ ಶಹರ ಠಾಣೆ, ಶಿವಾನಂದ ನಗರದಲ್ಲಿರುವ ಮನೆ ಹಾಗೂ ಸಿಪಿಐ ಡಿ.ಬಿ ಪಾಟೀಲ್ ಗೆ ಸೇರಿದ ಬಾಗಲಕೋಟೆ, ಜಮಖಂಡಿ, ಕೆರೂರ ಮನೆಗಳ ಮೇಲೂ ದಾಳಿ ನಡೆಸಿದ್ದು, ಪರಿಶೀಲನೆ ನಡೆಸಿದ್ದಾರೆ.
ಲೋಕಾಯುಕ್ತ ಡಿವೈಎಸ್ಪಿ ಪುಷ್ಪಲತಾ, ಪಿ.ಎಸ್ ಪಾಟೀಲ, ಸಿಪಿಐ ಪರಶುರಾಮ್ ಕವಟಗಿ ನೇತೃತ್ವದಲ್ಲಿ ಪರಿಶೀಲನೆ ನಡೆದಿದ್ದು, ಅನೇಕ ದಾಖಲೆಗಳು ಕಡತಗಳನ್ನು ವಶಕ್ಕೆ ಪಡೆದಿದ್ದಾರೆ ಎನ್ನಲಾಗಿದೆ.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.