ADVERTISEMENT

ಶಿರಹಟ್ಟಿ ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸರ ಬಲೆಗೆ

​ಪ್ರಜಾವಾಣಿ ವಾರ್ತೆ
Published 21 ಫೆಬ್ರುವರಿ 2026, 10:07 IST
Last Updated 21 ಫೆಬ್ರುವರಿ 2026, 10:07 IST
<div class="paragraphs"><p>ಶಾಸಕ ಚಂದ್ರು ಲಮಾಣಿ</p></div>

ಶಾಸಕ ಚಂದ್ರು ಲಮಾಣಿ

   

ಲಕ್ಷ್ಮೇಶ್ವರ: ಗುತ್ತಿಗೆದಾರರಿಂದ ಶಿರಹಟ್ಟಿ ಮತಕ್ಷೇತ್ರದ ಬಿಜೆಪಿ ಶಾಸಕ ಡಾ.ಚಂದ್ರು ಲಮಾಣಿ ಅವರ ಪಿಎ ಮಂಜುನಾಥ ತಳವಾರ ಹಾಗೂ ಗುರು ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ಶನಿವಾರ ಲಕ್ಷ್ಮೀಶ್ವರ ಪಟ್ಟಣದಲ್ಲಿ ನಡೆದಿದೆ.

ಶಾಸಕರ ಒಡೆತನದ ಬಾಲಾಜಿ ಆಸ್ಪತ್ರೆಯ ಮೇಲೆ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿದ್ದಾರೆ.

ADVERTISEMENT

ಈ ಸಂದರ್ಭದಲ್ಲಿ ಅವರ ಪಿಎ ರೆಡ್‌ಹ್ಯಾಂಡ್‌ ಆಗಿ ಸಿಕ್ಕಿ ಬಿದ್ದಿದ್ದು, ಆಸ್ಪತ್ರೆ ಹಿಂಭಾಗದ ಖಾಸಗಿ ಶಾಲೆಯೊಂದರ ಕಂಪೌಂಡ್ ಒಳಗೆ ಒಗೆದಿದ್ದ ಒಂದು ಲಕ್ಷ ರೂಪಾಯಿ ಕಟ್ಟು ಲೋಕಾಯುಕ್ತರಿಗೆ ಸಿಕ್ಕಿವೆ. ಹೆಚ್ಚಿನ ತನಿಖೆ ನಡೆಯುತ್ತಿದೆ.

ಶಾಸಕ ಚಂದ್ರು ಲಮಾಣಿ ಲೋಕಾಯುಕ್ತ ಪೊಲೀಸರ ಬಲೆಗೆ

ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಸಣ್ಣ ನೀರಾವರಿ ಇಲಾಖೆಯ ಗುತ್ತಿಗೆ ಕಾಮಗಾರಿಗೆ ಸಂಬಂಧಿಸಿದಂತೆ 11 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು.

ಕ್ಲಾಸ್-1 ಗುತ್ತಿಗೆದಾರರಿಂದ 5 ಲಕ್ಷ ಲಂಚ ಪಡೆಯುತ್ತಿದ್ದ ವೇಳೆ ಶಿರಹಟ್ಟಿ ಬಿಜೆಪಿ ಶಾಸಕ ಚಂದ್ರು ಲಮಾಣಿ ಅವರು ಲೋಕಾಯುಕ್ತ ಪೊಲೀಸರ ಬಲೆಗೆ ಬಿದ್ದಿದ್ದಾರೆ.

ಲೋಕಾಯುಕ್ತ ಎಸ್‌. ಸಿದ್ದಲಿಂಗಪ್ಪ ನೇತೃತ್ವದಲ್ಲಿ ಈ ದಾಳಿ ನಡೆಸಲಾಗಿದ್ದು, ಶಾಸಕರ ಜೊತೆಗೆ ಅವರ ಇಬ್ಬರು ಆಪ್ತ ಸಹಾಯಕರು (ಪಿಎ) ಮಂಜುನಾಥ್ ಮತ್ತು ಗುರು ಕೂಡ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ.

ಲಂಚ ಪಡೆಯುವಾಗ ಸಿಕ್ಕಿಬಿದ್ದ ಶಾಸಕ ಚಂದ್ರು ಲಮಾಣಿ ಅವರನ್ನು ಲೋಕಾಯುಕ್ತ ಪೊಲೀಸರು ತೀವ್ರ ವಿಚಾರಣೆಗೆ ಒಳಪಡಿಸಿದ್ದಾರೆ.

ಇದಲ್ಲದೆ, ಶಾಸಕ ಚಂದ್ರು ಲಮಾಣಿ ಅವರಿಗೆ ಸೇರಿದ ಬಾಲಾಜಿ ಆಸ್ಪತ್ರೆ ಮೇಲೂ ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದ್ದಾರೆ.

ಶಾಸಕರ ಬಾಲಾಜಿ ಆಸ್ಪತ್ರೆಯಲ್ಲಿ 4.50 ಲಕ್ಷ ರೂಪಾಯಿ ಹಾಗೂ ಖಾಸಗಿ ಶಾಲೆಯ ಕಂಪೌಂಡ್‌ನಲ್ಲಿ 5 ಲಕ್ಷ ರೂಪಾಯಿಯನ್ನು ಲೋಕಾಯುಕ್ತರ ಸಿಬ್ಬಂದಿಗೆ ವಶಕ್ಕೆ ಪಡೆದಿದ್ದಾರೆ

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.