ADVERTISEMENT

ಕಳಸಾ ಬಂಡೂರಿಗೆ ₹1 ಸಾವಿರ ಕೋಟಿ : ಸಚಿವ ಪಾಟೀಲ

​ಪ್ರಜಾವಾಣಿ ವಾರ್ತೆ
Published 22 ಜುಲೈ 2022, 5:12 IST
Last Updated 22 ಜುಲೈ 2022, 5:12 IST
ನರಗುಂದದ ದಲ್ಲಿ 42ನೇ ವರ್ಷದ ಹುತಾತ್ಮ ರೈತ ದಿನಾಚರಣೆ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ವೀರಗಲ್ಲಿಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದರು
ನರಗುಂದದ ದಲ್ಲಿ 42ನೇ ವರ್ಷದ ಹುತಾತ್ಮ ರೈತ ದಿನಾಚರಣೆ ಸಂದರ್ಭದಲ್ಲಿ ಲೋಕೋಪಯೋಗಿ ಇಲಾಖೆ ಸಚಿವ ಸಿ.ಸಿ.ಪಾಟೀಲ ವೀರಗಲ್ಲಿಗೆ ಮಾಲಾರ್ಪಣೆ ಸಲ್ಲಿಸಿ ಮಾತನಾಡಿದರು   

ನರಗುಂದ: ಬಿಜೆಪಿ ಸಕಾ೯ರ ಅಧಿಕಾರಕ್ಕೆ ಬಂದ ಮೇಲೆ ಕಳಸಾ ಬಂಡೂರಿ ನಾಲಾ ಯೋಜನೆಯ ಕಾಮಗಾರಿಗೆ ಹೆಚ್ಚಿನ ಆದ್ಯತೆ ನೀಡಲಾಗಿದೆ. ₹1 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ ಎಂದು ಲೋಕೋಪಯೋಗಿ ಸಚಿವ ಸಿ.ಸಿ.ಪಾಟೀಲ ಹೇಳಿದರು.

ಪಟ್ಟಣದಲ್ಲಿ ಗುರುವಾರ 42ನೇ ವರ್ಷದ ಹುತಾತ್ಮ ರೈತ ದಿನಾಚರಣೆ ಸಂದರ್ಭದಲ್ಲಿ ವೀರಗಲ್ಲಿಗೆ ಮಾಲಾಪ೯ಣೆ ಸಲ್ಲಿಸಿ ಮಾತನಾಡಿದರು.

ರಾಜ್ಯದಲ್ಲಿ ಬಿಜೆಪಿ ಅಧಿಕಾರಕ್ಕೆ ಬಂದ ಮೇಲೆ ಮಹದಾಯಿ ಹಾಗೂ ಕಳಸಾ ಬಂಡೂರಿ ಯೋಜನೆ ಜಾರಿಗೆ ಸರ್ವ ಪಕ್ಷಗಳ ಸಭೆ ಕರೆದು ಯೋಜನೆ ಜಾರಿಗೆ ಪ್ರಾಮಾಣಿಕ ಪ್ರಯತ್ನ ಮಾಡಲಾಗಿದೆ. ಬಿ.ಎಸ್. ಯಡಿಯೂರಪ್ಪನವರ ಅಧಿಕಾರದ ಅವಧಿಯಲ್ಲಿ ಈ ಯೋಜನೆ ಕಾಮಗಾರಿಗೆ ₹500 ಕೋಟಿ ಹಾಗೂ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ₹1 ಸಾವಿರ ಕೋಟಿ ಹಣ ಮೀಸಲಿಡಲಾಗಿದೆ. ಕಾನೂನು ತೊಡಕುಗಳಿಂದ ಯೋಜನೆ ಕಾಮಗಾರಿಗೆ ಹಿನ್ನಡೆಯಾಗಿದ್ದು, ಅವುಗಳನ್ನು ಬಗೆಹರಿಸಿ ಯೋಜನೆ ಜಾರಿ ಮಾಡಲಾಗುವುದು’ ಎಂದು ತಿಳಿಸಿದರು.

ADVERTISEMENT

ಟಿಎಪಿಸಿಎಂಎಸ್ ಅಧ್ಯಕ್ಷ ಅಜ್ಜಪ್ಪ ಹುಡೇದ, ಪಿಕಾರ್ಡ್ ಬ್ಯಾಂಕ್ ಅಧ್ಯಕ್ಷ ಎಂ.ಎಸ್. ಪಾಟೀಲ, ಬಿ.ಬಿ.ಐನಾಪೂರ, ಗುರುಪ್ಪ ಆದಪ್ಪನವರ, ಉಮೇಶಗೌಡ ಪಾಟೀಲ, ಶಿವಾನಂದ ಮುತ್ತವಾಡ,ಮಲ್ಲಪ್ಪ ಮೇಟಿ, ಎಂ.ಎಸ್. ತಿಮ್ಮನಗೌಡ್ರ, ಬಾಬು ಹಿರೇಹೊಳಿ, ಪ್ರಕಾಶಗೌಡ ತಿರಕನಗೌಡ್ರ, ಶಂಕರಗೌಡ ಪಾಟೀಲ, ಬಸ್ಸು ಪಾಟೇಲ, ಸಂಗಪ್ಪ ಪೂಜಾರ ಹಾಗೂ ಬಿಜೆಪಿ ಮುಖಂಡರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.