
ಪ್ರಜಾವಾಣಿ ವಾರ್ತೆ
ನರೇಗಲ್: ‘ಮೆಕ್ಕೆಜೋಳ ಬೆಳೆಗೆ ಸೂಕ್ತ ಬೆಲೆ ನಿಗದಿ ಪಡಿಸಬೇಕು’ ಎಂದು ರೈತ ಮುಖಂಡ ಗಿರೀಶ ವಿರೂಪಾಕ್ಷಪ್ಪ ಹೆಗ್ಗಡದಿನ್ನಿ ಆಗ್ರಹಿಸಿದರು.
ಈ ಕುರಿತು ಗುರುವಾರ ಪತ್ರಿಕಾ ಪ್ರಕಟಣೆ ನೀಡಿರುವ ಅವರು, ‘ಗದಗ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಬಹುತೇಕ ಭಾಗದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮೆಕ್ಕೆಜೋಳ ಬೆಳೆಯಲಾಗಿದೆ. ಅತಿವೃಷ್ಠಿಯಿಂದಾಗಿ ರೈತರಿಗೆ ನಷ್ಟವಾಗಿದೆ. ಪ್ರತಿ ವರ್ಷ ಮಾರುಕಟ್ಟೆಯಲ್ಲಿ ಮೆಕ್ಕೆಜೋಳಕ್ಕೆ ಕ್ವಿಂಟಲ್‌ಗೆ ₹2200ಕ್ಕೂ ಅಧಿಕ ಬೆಲೆ ನೀಡುತ್ತಿದ್ದರು. ಆದರೆ, ಈ ಬಾರಿ ಪ್ರತಿ ಕ್ವಿಂಟಲ್‌ಗೆ ಕೇವಲ ₹1700 ದರ ನೀಡುತ್ತಿದ್ದು, ರೈತರಿಗೆ ನಷ್ಟವಾಗುತ್ತಿದೆ. ಆದ್ದರಿಂದ ಮೆಕ್ಕೆಜೋಳಕ್ಕೆ ₹2400 ಹೆಚ್ಚಿನ ದರ ನಿಗದಿಪಡಿಸಿ ಖರೀದಿ ಕೇಂದ್ರ ಆರಂಭಿಸಬೇಕು’ ಎಂದು ಆಗ್ರಹಿಸಿದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.