ನರಗುಂದ: ಮಲಪ್ರಭಾ ಕಾಲುವೆಗಳಿಗೆ ನವಿಲುತೀರ್ಥ ಜಲಾಶಯದಿಂದ ನೀರು ಹರಿಸುವಂತೆ ಆಗ್ರಹಿಸಿ ರೈತ ಸೇನಾ ಸದಸ್ಯರು ನೀರಾವರಿ ಇಲಾಖೆಗೆ ಮನವಿ ಸಲ್ಲಿಸಿದರು.
ರೈತ ಸೇನಾ ಕರ್ನಾಟಕದ ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ಬಿ.ಜೋಗಣ್ಣವರ ಮಾತನಾಡಿ, ‘ಹಿಂಗಾರು ಬಿತ್ತನೆ ಆರಂಭವಾಗಿದ್ದು, ಬೀಜ ಮೊಳಕೆಯೊಡೆಯಲು ತೇವಾಂಶ ಕೊರತೆಯಾಗಿದೆ. ನವಿಲುತೀರ್ಥ ಜಲಾಶಯದಿಂದ ಕಾಲುವೆಗಳಿಗೆ ನೀರು ಹರಿಸಬೇಕು. ಇಲ್ಲವಾದರೆ ನೀರಾವರಿ ಕಚೇರಿ ಎದುರು ಪ್ರತಿಭಟನೆ ನಡೆಸಲಾಗುವುದು ಎಂದು ಸದಸ್ಯರು ಎಚ್ಚರಿಸಿದರು.
ವೀರಬಸಪ್ಪ ಹೂಗಾರ, ಪರಶುರಾಮ ಜಂಬಗಿ, ಅರ್ಜುನ ಮಾನೆ, ಎಸ್.ಕೆ. ಗಿರಿಯಣ್ಣವರ, ಫಕೀರಪ್ಪ ಅಣ್ಣಿಗೇರಿ, ವಾಸು ಚವ್ಹಾಣ, ಬಸಪ್ಪ ಗುಡದೇರಿ, ಸಿ.ಎಸ್. ಪಾಟೀಲ, ಬಸಪ್ಪ, ಹಾಲನ್ನವರ, ಹನಮಂತ ಕೋರಿ, ರಾಜಾರಾಮ ಮುಳಿಕ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.