ADVERTISEMENT

ಗದಗ: ಪತ್ನಿ ಕೊಂದಿದ್ದ ವ್ಯಕ್ತಿಗೆ ಜೀವಾವಧಿ ಶಿಕ್ಷೆ

​ಪ್ರಜಾವಾಣಿ ವಾರ್ತೆ
Published 30 ನವೆಂಬರ್ 2021, 5:50 IST
Last Updated 30 ನವೆಂಬರ್ 2021, 5:50 IST

ಗದಗ: ಪತ್ನಿಯನ್ನು ಸಂಶಯಿಸಿ ಹತ್ಯೆ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಆರೋಪಿಗೆ ಇಲ್ಲಿನ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಲಯ ಜೀವಾವಧಿ ಶಿಕ್ಷೆ ವಿಧಿಸಿ ತೀರ್ಪು ಪ್ರಕಟಿಸಿದೆ.

2019ರ ಮೇ 09ರಂದು ಹೆಂಡತಿಯ ತಲೆಗೆ ಕೊಡಲಿಯಿಂದ ಹೊಡೆದು ಹತ್ಯೆ ಮಾಡಿದ್ದ ಗೋನಾಳ ಗ್ರಾಮದ ಆರೋಪಿ ರಮೇಶ ದುಂಡಪ್ಪ ತೇಲಿ, ಬಳಿಕ ತನ್ನ ಆರು ತಿಂಗಳ ಮಗನ ಕುತ್ತಿಗೆಯ ಮೇಲೆ ಕಾಲಿಟ್ಟು ಉಸಿರುಗಟ್ಟಿಸಿ ಕೊಲೆ ಮಾಡಿದ್ದ. ಈ ಸಂಬಂಧ ದಾಖಲಾಗಿದ್ದ ಪ್ರಕರಣದ ತನಿಖೆ ನಡೆಸಿ ಶಿರಹಟ್ಟಿ ಸಿಪಿಐ ಬಾಲಚಾಂದ್ರ ಡಿ. ಅವರು ನ್ಯಾಯಾಲಯಕ್ಕೆ ಆರೋಪಿ ವಿರುದ್ಧ ದೋಷಾರೋಪಣಾ ಪಟ್ಟಿ ಸಲ್ಲಿಸಿದ್ದರು.

ಸಾಕ್ಷಿ ವಿಚಾರಣೆ ನಡೆಸಿದ ಗದಗ ಪ್ರಧಾನ ಜಿಲ್ಲಾ ಮತ್ತು ಸೆಷನ್ಸ್‌ ನ್ಯಾಯಾಧೀಶೆ ಎಸ್‌.ಮಹಾಲಕ್ಷ್ಮೀ ನೇರಳೆ ಅವರು ಆರೋಪ ರುಜುವಾಗಿದ್ದರಿಂದ ರಮೇಶ ತೇಲಿಗೆ ಜೀವಾವಧಿ ಶಿಕ್ಷೆ ಹಾಗೂ ₹10 ಸಾವಿರ ತಂಡ ವಿಧಿಸಿತೀರ್ಪು ಪ್ರಕಟಿಸಿದ್ದಾರೆ. ದಂಡ ತುಂಬಲು ತಪ್ಪಿದಲ್ಲಿ ಮತ್ತೆ ಆರು ತಿಂಗಳು ಸಾದಾ ಶಿಕ್ಷೆ ವಿಧಿಸಿದ್ದರೆ.ಈ ಪ್ರಕರಣದಲ್ಲಿ ಸರ್ಕಾರದ ಪರವಾಗಿ ಸವಿತಾ ಎಂ.ಶಿಗ್ಲಿ ವಾದ ಮಂಡಿಸಿದ್ದರು ಎಂದು ಪ್ರಕಟಣೆ ತಿಳಿಸಿದೆ.

ADVERTISEMENT

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.