ADVERTISEMENT

ಪಹಲ್ಗಾಮ್‍ ದಾಳಿ: ಹೇಡಿತನದ ಕೃತ್ಯ– ಅಶೋಕ ಮಂದಾಲಿ

​ಪ್ರಜಾವಾಣಿ ವಾರ್ತೆ
Published 23 ಏಪ್ರಿಲ್ 2025, 15:02 IST
Last Updated 23 ಏಪ್ರಿಲ್ 2025, 15:02 IST
ಅಶೋಕ ಮಂದಾಲಿ
ಅಶೋಕ ಮಂದಾಲಿ   

ಗದಗ: ‘ಜಮ್ಮು-ಕಾಶ್ಮೀರದ ಪಹಲ್ಗಾಮ್‍ನಲ್ಲಿ ಪ್ರವಾಸಿಗರ ಮೇಲೆ ನಡೆದಿರುವ ಉಗ್ರರ ದಾಳಿ ಅತ್ಯಂತ ಖಂಡನೀಯ. ಉಗ್ರರ ಈ ಹೇಡಿ ಕೃತ್ಯವನ್ನು ಪ್ರತಿಯೊಬ್ಬರೂ ಬಲವಾಗಿ ಖಂಡಿಸಬೇಕು’ ಎಂದು ಗದಗ ತಾಲ್ಲೂಕು ಗ್ಯಾರಂಟಿ ಅನುಷ್ಠಾನ ಪ್ರಾಧಿಕಾರದ ಅಧ್ಯಕ್ಷ  ಅಶೋಕ ಮಂದಾಲಿ ತಿಳಿಸಿದ್ದಾರೆ.

‘ನೂರಾರು ಜನ ಪ್ರವಾಸಿಗರು ಇದ್ದ ಜಾಗದಲ್ಲಿ ಭದ್ರತಾ ವ್ಯವಸ್ಥೆ ಇರಲಿಲ್ಲ. ಇದು ಕೇಂದ್ರ ಸರ್ಕಾರ ಮತ್ತು ಜಮ್ಮು ಕಾಶ್ಮೀರ ರಾಜ್ಯ ಸರ್ಕಾರದ ನಿರ್ಲಕ್ಷ್ಯ ಮತ್ತು ಬೇಹುಗಾರಿಕೆ ವೈಫಲ್ಯವೇ ಉಗ್ರರ ದಾಳಿಗೆ ಪ್ರಮುಖ ಕಾರಣವಾಗಿದೆ. ದಾಳಿ ನಡೆಸಿದ ಉಗ್ರಗಾಮಿಗಳನ್ನು ಯಾವ ಮುಲಾಜೂ ಇಲ್ಲದೆ ಸದೆಬಡಿಯಬೇಕು’ ಎಂದು ಹೇಳಿದ್ದಾರೆ.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.

ADVERTISEMENT