ADVERTISEMENT

ಗದಗ | ರಾಷ್ಟ್ರೀಯ ಹುತಾತ್ಮ ದಿನಾಚರಣೆ

​ಪ್ರಜಾವಾಣಿ ವಾರ್ತೆ
Published 31 ಜನವರಿ 2026, 8:16 IST
Last Updated 31 ಜನವರಿ 2026, 8:16 IST
ಗದಗ ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಹುತಾತ್ಮರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ನಮನ ಸಲ್ಲಿಸಿದರು
ಗದಗ ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್‌ರಾಜ್‌ ವಿಶ್ವವಿದ್ಯಾಲಯದಲ್ಲಿ ಶುಕ್ರವಾರ ನಡೆದ ಹುತಾತ್ಮರ ದಿನಾಚರಣೆಯಲ್ಲಿ ವಿದ್ಯಾರ್ಥಿಗಳು ನಮನ ಸಲ್ಲಿಸಿದರು   

ಗದಗ: ಮಹಾತ್ಮ ಗಾಂಧೀಜಿಯವರ 78ನೇ ಪುಣ್ಯಸ್ಮರಣೆ ಹಾಗೂ ರಾಷ್ಟ್ರೀಯ ಹುತಾತ್ಮ ದಿನಾಚರಣೆ ಅಂಗವಾಗಿ ನಗರದ ಮಹಾತ್ಮ ಗಾಂಧಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ವಿಶ್ವವಿದ್ಯಾಲಯದ ಸಬರಮತಿ ಆಶ್ರಮದಲ್ಲಿ ಗಾಂಧೀಜಿಗೆ ನಮನ ಸಲ್ಲಿಸಲಾಯಿತು.

ಶುಕ್ರವಾರ ಬೆಳಿಗ್ಗೆ 11ಕ್ಕೆ ಎರಡು ನಿಮಿಷಗಳ ಮೌನಾಚರಣೆ ಕೈಗೊಳ್ಳುವ ಮೂಲಕ ಹುತಾತ್ಮರಿಗೆ ನಮನ ಸಲ್ಲಿಸಲಾಯಿತು. ಈ ಮೂಲಕ ದೇಶದ ಸ್ವಾತಂತ್ರ್ಯ ಮತ್ತು ಏಕತೆಗಾಗಿ ಪ್ರಾಣ ತ್ಯಾಗ ಮಾಡಿದ ಮಹಾತ್ಮ ಗಾಂಧೀಜಿ ಸೇರಿದಂತೆ ಎಲ್ಲಾ ಹುತಾತ್ಮರಿಗೆ ನಮನಗಳನ್ನು ಅರ್ಪಿಸಲಾಯಿತು.

ವಿಶ್ವವಿದ್ಯಾಲಯದ ಅಧಿಕಾರಿಗಳಾದ ಉಮೇಶ್ ಬಾರಕೇರ, ಮೃತ್ಯುಂಜಯ ಮೆಣಸಿನಕಾಯಿ, ಪ್ರೊ. ಗಿರೀಶ ದೀಕ್ಷಿತ್, ಎಂ.ಎಂ.ಮಂಜುನಾಥ್ ಹಾಗೂ ಸಬರಮತಿ ಆಶ್ರಮದ ಸಂಚಾಲಕ ಪ್ರಕಾಶ್ ಮಾಚೇನಹಳ್ಳಿ ಉಪಸ್ಥಿತರಿದ್ದರು.

ADVERTISEMENT

ವಿಶ್ವವಿದ್ಯಾಲಯದ ಅಧಿಕಾರಿಗಳು, ಅಧ್ಯಾಪಕರು ಹಾಗೂ ವಿದ್ಯಾರ್ಥಿಗಳು ಭಾಗವಹಿಸಿದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.