ಮುಳಗುಂದ: ಸಮೀಪದ ಸೊರಟೂರು ಗ್ರಾಮದಲ್ಲಿ ದಸರಾ ಉತ್ಸವ ಅಂಗವಾಗಿ ಆದಿಶಕ್ತಿ ವಿವಿಧೋದ್ದೇಶ ಟ್ರಸ್ಟ್ ಹಾಗೂ ಸದ್ಭಕ್ತ ಮಂಡಳಿಯಿಂದ ಸೆ.28 ರಂದು ಬೆಳಿಗ್ಗೆ 10 ಗಂಟೆಗೆ ಸರ್ವಧರ್ಮಗಳ ಉಚಿತ ಸಾಮೂಹಿಕ ವಿವಾಹ ಸಮಾರಂಭವನ್ನು ಹಮ್ಮಿಕೊಳ್ಳಲಾಗಿದೆ ಎಂದು ಟ್ರಸ್ಟ್ ಅಧ್ಯಕ್ಷ ಶಿವಾನಂದ ಮಾದಣ್ಣವರ ಹೇಳಿದರು.
ಶುಕ್ರವಾರ ನಡೆದ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ಕಾರ್ಯಕ್ರಮದಲ್ಲಿ ಮಹಾಲಿಂಗೇಶ್ವರ ಮಠದ ಚನ್ನವೀರ ಸ್ವಾಮೀಜಿ, ಮಣಕವಾಡ ದೇವಮಂದಿರ ಅಬಿನವ ಮೃತ್ಯುಂಜಯ ಸ್ವಾಮೀಜಿ, ಓಂಕಾರೇಶ್ವರ ಮಠದ ಫಕ್ಕೀರೇಶ್ವರ ಸ್ವಾಮೀಜಿ, ವರವಿ ಮೌನೇಶ್ವರ ಮಠದ ಮೌನೇಶ್ವರ ಸ್ವಾಮೀಜಿ ಸಾನ್ನಿಧ್ಯ ವಹಿಸುವರು. ಸಚಿವ ಎಚ್.ಕೆ. ಪಾಟೀಲ, ಸಂಸದ ಬಸವರಾಜ ಬೊಮ್ಮಾಯಿ, ಮಾಜಿ ಶಾಸಕ ಡಿ.ಆರ್. ಪಾಟೀಲ, ವಿಧಾನ ಪರಿಷತ್ ಸದಸ್ಯ ಎಸ್.ವಿ. ಸಂಕನೂರ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಚಂದ್ರವ್ವ ಓಂಕಾರಿ, ಉಪಾಧ್ಯಕ್ಷ ಮೇಲಗಿರಿಗೌಡ ಪಾಟೀಲ ಭಾಗವಹಿಸುವರು ಎಂದು ತಿಳಿಸಿದರು.
ಸಿ.ಬಿ. ಸಂಶಿ, ರಾಮಣ್ಣ ಕಮ್ಮಾರ, ರಮೇಶ ಓಂಕಾರಿ, ಶಂಕ್ರಪ್ಪ ಅಡ್ರಕಟ್ಟಿ, ಮುರಿಗೆಪ್ಪ ಕುಸ್ಲಾಪೂರ, ಶಿವನಪ್ಪ ಚಪಾಟಿ, ಅರವಿಂದ ಗುಡಿ ಇದ್ದರು.
ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.