ADVERTISEMENT

ಸಾಮೂಹಿಕ ವಿವಾಹದಿಂದ ದುಂದು ವೆಚ್ಚ ಕಡಿವಾಣ: ಚನ್ನಬಸವ ಸ್ವಾಮೀಜಿ

​ಪ್ರಜಾವಾಣಿ ವಾರ್ತೆ
Published 16 ಜನವರಿ 2026, 4:23 IST
Last Updated 16 ಜನವರಿ 2026, 4:23 IST
ಲಕ್ಷ್ಮೇಶ್ವರ ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಯಿತು  
ಲಕ್ಷ್ಮೇಶ್ವರ ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಸಾಮೂಹಿಕ ವಿವಾಹ ಕಾರ್ಯಕ್ರಮ ನಡೆಸಲಾಯಿತು     

ಪ್ರಜಾವಾಣಿ ವಾರ್ತೆ

ಲಕ್ಷ್ಮೇಶ್ವರ: ‘ಸಾಮೂಹಿಕ ವಿವಾಹ ನಡೆಸುವುದರಿಂದ ದುಂದು ವೆಚ್ಚಕ್ಕೆ ಕಡಿವಾಣ ಹಾಕಲು ಸಾಧ್ಯ. ಬಡವರಿಗೆ ಅನುಕೂಲ ಕಲ್ಪಿಸುವ ಉದ್ಧೇಶದಿಂದ ಪ್ರತಿವರ್ಷ ಹೂವಿನಶಿಗ್ಲಿ ವಿರಕ್ತಮಠದಲ್ಲಿ ಸಾಮೂಹಿಕ ವಿವಾಹ ನಡೆಸುವ ಕಾರ್ಯ ಶ್ಲಾಘನೀಯ’ ಎಂದು ಸವಣೂರು ದೊಡ್ಡಹುಣಸೆಮಠದ ಚನ್ನಬಸವ ಸ್ವಾಮೀಜಿ ಹೇಳಿದರು.

ಸಮೀಪದ ಹೂವಿನಶಿಗ್ಲಿ ವಿರಕ್ತಮಠದ ಜಾತ್ರಾ ಮಹೋತ್ಸವ ಅಂಗವಾಗಿ ಗುರುವಾರ ಹಮ್ಮಿಕೊಂಡಿದ್ದ ಸಾಮೂಹಿಕ ವಿವಾಹ ಕಾರ್ಯಕ್ರಮದ ಸಾನ್ನಿಧ್ಯ ವಹಿಸಿ ಮಾತನಾಡಿದರು.

ADVERTISEMENT

ಅಧ್ಯಕ್ಷತೆ ವಹಿಸಿದ ಮಠದ ಚೆನ್ನವೀರ ಸ್ವಾಮೀಜಿ ಮಾತನಾಡಿ, ‘ಮಠದ ಹಿಂದಿನ ಮಠಾಧೀಶರಾದ ಲಿಂ.ನಿರಂಜನ ಸ್ವಾಮೀಜಿ ಅವರ ಮಾರ್ಗದರ್ಶನದಲ್ಲಿ ಮಠ ಮುನ್ನಡೆಸಿಕೊಂಡು ಹೋಗುತ್ತಿದ್ದೇವೆ. ಭಕ್ತರ ಸಹಕಾರದಿಂದ ಮಠ ಅಭಿವೃದ್ಧಿ ಆಗುತ್ತಿದೆ. ಮಠದಲ್ಲಿ ಅನೇಕ ವಿದ್ಯಾರ್ಥಿಗಳಿಗೆ ಉಚಿತ ದಾಸೋಹ, ವಸತಿ, ವಿದ್ಯೆ ನೀಡಲಾಗುತ್ತಿದೆ’ ಎಂದು ಹೇಳಿದರು.

ನವಲಗುಂದ ಗವಿಮಠದ ಬಸವಲಿಂಗ ಸ್ವಾಮೀಜಿ, ಗುಡ್ಡದನ್ವೇರಿ ವಿರಕ್ತಮಠದ ಶಿವಯೋಗೀಶ್ವರ ಸ್ವಾಮೀಜಿ, ಹಿರೇಮಲ್ಲನಕೇರಿ ವಿರಕ್ತಮಠದ ಅಭಿನವ ಚನ್ನಬಸವ ಸ್ವಾಮೀಜಿ, ಬಸವೇಶ ಮಹಾಂತಶೆಟ್ಟರ, ಚಂಬಣ್ಣ ಬಾಳಿಕಾಯಿ, ನೀಲಪ್ಪ ಕರ್ಜೆಕಣ್ಣವರ ವಾಲಿಶೆಟ್ರ, ಎಂ.ಎಂ. ಹಿರೇಮಠ ಇದ್ದರು.

ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ವಾಟ್ಸ್ಆ್ಯಪ್, ಎಕ್ಸ್, ಫೇಸ್‌ಬುಕ್ ಮತ್ತು ಇನ್‌ಸ್ಟಾಗ್ರಾಂನಲ್ಲಿ ಪ್ರಜಾವಾಣಿ ಫಾಲೋ ಮಾಡಿ.